Published
60 minutes agoon
By
Akkare News
ಮಂಗಳೂರು ಉಪವಿಭಾಗದ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (10ನೇ ತರಗತಿವರೆಗೆ) ಹಾಗೂ ಎಲ್ಲಾ ವಸತಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಪುತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು (12ನೇ ತರಗತಿವರೆಗೆ), ಎಲ್ಲಾ ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳು ಮತ್ತು ವಸತಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.ಸಾರ್ವಜನಿಕರು ಹಾಗೂ ಪಾಲಕರು ಮಕ್ಕಳು ನದಿ, ಕೆರೆ, ತಗ್ಗು ಪ್ರದೇಶ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.