Published
17 hours agoon
By
Akkare News
ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕೊನೆಯ ಕ್ಷಣದಲ್ಲಿ ಮಹತ್ವದ ತಿರುವು ಪಡೆದಿದ್ದು, ಸಚಿವ ಸ್ಥಾನಕ್ಕೆ ಬಹುತೇಕ ಖಚಿತ ಎಂದು ಹೇಳಲಾಗಿದ್ದ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರಿಗೆ ಅವಕಾಶ ಕೈತಪ್ಪಿದೆ. ಅವರ ಬದಲಿಗೆ ವಿಧಾನ ಪರಿಷತ್ ಸದಸ್ಯ ಭೋಸರಾಜು ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎನ್ನುವ ಬೆಳವಣಿಗೆ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. 
ಸಂಪುಟ ವಿಸ್ತರಣೆಯ ನಂತರ ಈಗಾಗಲೇ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಲವು ಕಾಂಗ್ರೆಸ್ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಕೆಲವರು ಬಹಿರಂಗವಾಗಿಯೇ ತಮ್ಮ ಬೇಸರ ಹೊರಹಾಕಿದ್ದಾರೆ. ಈ ಬೆಳವಣಿಗೆಗಳ ನಡುವೆ ಗಾಯತ್ರಿ ಶಾಂತೇಗೌಡ ಅವರ ಹೆಸರು ಕೈಬಿಟ್ಟು ಭೋಸರಾಜು ಅವರಿಗೆ ಅವಕಾಶ ನೀಡಿರುವುದು ಪಕ್ಷದೊಳಗೆ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆಯ ಬಗ್ಗೆ ಕಾಂಗ್ರೆಸ್ ನಾಯಕತ್ವ ಯಾವ ರೀತಿಯ ಪ್ರತಿಕ್ರಿಯೆ ನೀಡಲಿದೆ ಹಾಗೂ ಗಾಯತ್ರಿ ಶಾಂತೇಗೌಡ ಅವರನ್ನು ಸಮಾಧಾನಪಡಿಸಲು ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಇನ್ನೂ ಎಐಸಿಸಿ ಬಿಡುಗಡೆ ಮಾಡಿದ ಮೊದಲ ಸಚಿವರ ಪಟ್ಟಿಯಲ್ಲಿ ಮಂಕಾಳು ವೈದ್ಯ ಅವರ ಹೆಸರು ಪ್ರಕಟವಾಗಿತ್ತು. ಆದರೆ ನಂತರದ ಕೈ ಪಾಳಯದಲ್ಲಿ ಆದ ಬೆಳವಣಿಗೆಯಲ್ಲಿ, ಮಂಕಾಳು ವೈದ್ಯ ಅವರ ಸ್ಥಾನದಲ್ಲಿ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಅವಕಾಶ ಕಲ್ಪಿಸಿ ಎರಡನೇ ಪಟ್ಟಿಯನ್ನು ಹೊರಡಿಸಲಾಯಿತು.
ಇನ್ನೂ ಸಿದ್ದರಾಮಯ್ಯ ಸಂಪುಟದಲ್ಲಿ ಮಹಿಳಾ ಕೋಟಾದಡಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನವನ್ನ ನೀಡಲಾಗಿತ್ತು. ಇದೀಗ ಮಹಿಳಾ ಕೋಟಾದಡಿಯಲ್ಲಿ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರಿಗೆ ಸಚಿವ ಸ್ಥಾನ ಒಲಿದುಬಂದಿತ್ತು. ಇದೀಗ ಸಿದ್ದರಾಮಯ್ಯ ಅವರು, ಗಾಯತ್ರಿ ಶಾಂತೇಗೌಡ ಅವರಿಗೆ ಪ್ರಮಾಣವಚನ ಸ್ವೀಕರಿಸದಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಇತ್ತ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಂಪುಟದಲ್ಲಿ ಮಹಿಳಾ ಸಚಿವ ಸ್ಥಾನಕ್ಕೆ ಗಾಯತ್ರಿ ಅವರ ಹೆಸರು ಘೋಷಣೆ ನಡುವೆಯೂ ಲಕ್ಷ್ಮೀ ಹೆಬ್ಬಾಳ್ಕರ್ ಉಮಾಶ್ರೀ ನಡುವೆ ತೀವ್ರ ಪೈಪೋಟಿ ನಡೆದಿದೆ. ಹೀಗಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರ ನಿವಾಸದಲ್ಲಿ ಮಹತ್ವದ ಸಭೆ ನಡೆಸಲಾಗಿದ್ದು, ಕೊನೆ ಕ್ಷಣದಲ್ಲಿ ಗಾಯತ್ರಿ ಹೆಸರನ್ನ ಕೈ ಬಿಡಲಾಗಿದೆ ಎಂದು ತಿಳಿದು ಬಂದಿದೆ.




