Published
2 hours agoon
By
Akkare News
ಪ್ರಸ್ತುತ ರಥಬೀದಿಯ ಮಧ್ಯೆ ರಸ್ತೆ ಸಂಪರ್ಕ ಇರುವುದರಿಂದ ದೇವಸ್ಥಾನದ ರಕ್ಷಣೆಗೆ ತೊಂದರೆಯಾಗುತ್ತಿರುವುದನ್ನು ಮನಗಂಡು, ತೋಡಿನ ಬದಿಯಲ್ಲಿ ರಸ್ತೆ ನಿರ್ಮಿಸಿಕೊಡುವಂತೆ ಮನವಿ ಮಾಡಿದ್ದೆವು ಎಂದು ನಿವಾಸಿಗಳು ತಿಳಿಸಿದ್ದಾರೆ.ಈ ರಸ್ತೆ ಕಾಮಗಾರಿ ಆರಂಭವಾದ ಬಳಿಕ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಕಾಮಗಾರಿಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸದೆ ಪೂರ್ಣಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.ನಿವೃತ್ತ ಶಿಕ್ಷಕಿ ವೇದಾವತಿ ಮಾತನಾಡಿ, “ದೇವಸ್ಥಾನದ ಜಾಗಕ್ಕೆ ಹೊಂದಿಕೊಂಡಿರುವ ಸುಮಾರು 25 ಮನೆಗಳಿಗೆ ಸಮರ್ಪಕ ರಸ್ತೆ ಇಲ್ಲ. 
ಹೀಗಾಗಿ ನೂತನ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ನಿವಾಸಿಗಳು ಮನವಿ ಸಲ್ಲಿಸಿದ್ದಾರೆ.ಮನವಿ ಸಲ್ಲಿಸುವ ಸಂದರ್ಭದಲ್ಲಿ ರಾಜೇಶ್, ನಿವೃತ್ತ ಶಿಕ್ಷಕಿ ವೇದಾವತಿ, ಶಿಕ್ಷಕ ಶ್ರೀಕಾಂತ್, ದಿವಾಕರ ಮಡಿವಾಳ, ಯೋಗೀಶ್, ವಿಶ್ವೇಶ್ವರ, ಗಿರೀಶ್ ಸೇರಿದಂತೆ ಕಂಬಳಕೋಡಿ ನಿವಾಸಿಗಳು ಉಪಸ್ಥಿತರಿದ್ದರು.




