Connect with us

ಇತರ

ರಾಜ್ಯದ ಗೃಹಜ್ಯೋತಿ ಫಲಾನುಭವಿಗಳು ಗಮನಿಸಲೇಬೇಕಾದ ಮಹತ್ವದ ಮಾಹಿತಿ

Published

on

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿಗಳಲ್ಲಿ ಗೃಹಜ್ಯೋತಿ ಯೋಜನೆ ಕೂಡ ಒಂದಾಗಿದೆ. ಇದೀಗ ಈ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿದ್ದವರಿಗೆ ಬಿಗ್ ಶಾಕ್‌ವೊಂದು ಎದುರಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಗೃಹ ಜ್ಯೋತಿ’ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇದರಡಿಯಲ್ಲಿ ಉಚಿತ ವಿದ್ಯುತ್ ಪಡೆಯುತ್ತಿರುವ ಇಂತಹ ಫಲಾನುಭವಿಗಳಿಗೆ ಇಂಧನ ಇಲಾಖೆಯಿಂದ ಶಾಕಿಂಗ್ ಸುದ್ದಿ ಎದುರಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮನೆ-ಮನೆ ಸಮೀಕ್ಷೆಯಲ್ಲಿ ಅಗತ್ಯ ದಾಖಲೆಗಳು ಮತ್ತು ಮಾಹಿತಿಯನ್ನು ನೀಡದ ಫಲಾನುಭವಿಗಳು ಈ ಯೋಜನೆಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಎಷ್ಟು ಜನ ಫಲಾನುಭವಿಗಳಿದ್ದಾರೆ? ಯೋಜನೆಯ ಲಾಭವು ಕೇವಲ ಅರ್ಹ ಮತ್ತು ನಿಜವಾದ ಫಲಾನುಭವಿಗಳಿಗೆ ಮಾತ್ರ ತಲುಪುತ್ತಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಲು ಹಾಗೂ ಡೇಟಾವನ್ನು ನವೀಕರಿಸಲು ಸರ್ಕಾರವು ಈ ಸಮೀಕ್ಷೆಯನ್ನು ನಡೆಸುತ್ತಿದೆ. ಇಂಧನ ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ 1.65 ಕೋಟಿಗೂ ಹೆಚ್ಚು ಫಲಾನುಭವಿಗಳಿದ್ದಾರೆ. 2026ರ ಆಗಸ್ಟ್ 2ರ ವೇಳೆಗೆ ಸುಮಾರು 91.50 ಲಕ್ಷ ಮನೆಗಳ ಸಮೀಕ್ಷೆ ಪೂರ್ಣಗೊಂಡಿದ್ದರೆ, ಇನ್ನುಳಿದ 73.80 ಲಕ್ಷಕ್ಕೂ ಹೆಚ್ಚು ಮನೆಗಳ ಮಾಹಿತಿ ಸಂಗ್ರಹ ಆಗಬೇಕಿದೆ. ಫಲಾನುಭವಿಗಳಿಗೆ ಎಚ್ಚರಿಕೆ ಸಂದೇಶ ಸಮೀಕ್ಷೆ ವೇಳೆ ಗ್ರಾಹಕರು ಮನೆಯಲ್ಲಿ ಇಲ್ಲದಿದ್ದರೆ ಅಥವಾ ಮಾಹಿತಿ ನೀಡಲು ನಿರಾಕರಿಸಿದರೆ ಅವರ ಮಾಹಿತಿಯನ್ನು ಸಂಗ್ರಹಿಸಲು ಸಾಧ್ಯ ಆಗುವುದಿಲ್ಲ. ಆದ್ದರಿಂದ ಅವರು ಯೋಜನೆಯ ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ಎಚ್ಚರಿಕೆಯನ್ನು ಇಲಾಖೆ ನೀಡಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ರಾಜ್ಯದ ಎಲ್ಲಾ ಎಸ್ಕಾಂ ಕಚೇರಿಗಳಲ್ಲಿ ವಿಶೇಷ ಸಮೀಕ್ಷಾ ಶಿಬಿರಗಳನ್ನು ನಡೆಸಲು ಸರ್ಕಾರದ ಅನುಮತಿ ಕೋರಲಾಗಿದೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version