Published
9 hours agoon
By
Akkare News
ಪುತ್ತೂರಿನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಗೌರವಾಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಮಾತನಾಡಿ, ಜುಲೈ 12ರಿಂದ ಆಗಸ್ಟ್ 28ರವರೆಗೆ ಒಂದು ಮಂಡಲದ ಅವಧಿಯಲ್ಲಿ ಶ್ರೀ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ಆಗಸ್ಟ್ 9ರಂದು ಬೆಳಿಗ್ಗೆ 10.30ಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಿಂದ ವಿವಿಧ ವಾಹನಗಳ ಮೂಲಕ ಬೃಹತ್ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ಶ್ರೀಧಾಮ ಮಾಣಿಲದತ್ತ ಹೊರಡಲಿದೆ ಎಂದು ಹೇಳಿದರು.