Connect with us

ನಿಧನ

ಸುರತ್ಕಲ್: ಸೂರಿಂಜೆಯಲ್ಲಿ ವಾಲಿಬಾಲ್ ಆಡುತ್ತಿದ್ದಾಗ ಹಠಾತ್ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು!

Published

on

ಸುರತ್ಕಲ್ ಆಗಸ್ಟ್ 6: ಗೆಳೆಯರೊಂದಿಗೆ ವಾಲಿಬಾಲ್ ಆಡುತ್ತಿದ್ದ 15 ವರ್ಷದ ಶಾಲಾ ಬಾಲಕನೊಬ್ಬ ಆಟದ ಮೈದಾನದಲ್ಲೇ ಹಠಾತ್ ಕುಸಿದು ಬಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುರಂತ ಘಟನೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ಅಗಸ್ಟ್ 5ರ ಬುಧವಾರ ಸಂಭವಿಸಿದೆ. ಮೃತ ಬಾಲಕನನ್ನು ಮಾಧವ ಅಮೀನ್ ಎಂಬುವರ ಪುತ್ರ ಲಿಖಿತ್ ಅಮೀನ್ (15) ಎಂದು ಗುರುತಿಸಲಾಗಿದೆ.

ಈತ ಸೂರಿಂಜೆಯ ಕೋಟೆ ಬೋಳ್ಳಾರು ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.ಬುಧವಾರ ಸಂಜೆ ಸೂರಿಂಜೆ ಮೈದಾನದಲ್ಲಿ ಲಿಖಿತ್ ಅಮೀನ್ ತನ್ನ ಸ್ನೇಹಿತರೊಂದಿಗೆ ವಾಲಿಬಾಲ್ ಆಟವಾಡುತ್ತಿದ್ದಾಗ ಏಕಾಏಕಿ ತೀವ್ರ ಅಸ್ವಸ್ಥಗೊಂಡು ಮೈದಾನದಲ್ಲೇ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಒಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಬಾಲಕ ಈಗಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

 ಆಟವಾಡುವಾಗ ಉಂಟಾದ ತೀವ್ರ ಹೃದಯಾಘಾತ ಅಥವಾ ಅಸ್ವಸ್ಥತೆಯಿಂದ ಈ ಸಾವು ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement