Published
8 hours agoon
By
Akkare News
ನಗರಸಭೆಯ ಮಾಜಿ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಅವರ ಮಗೆ ಕೃಷ್ಣ ಜೆ.ರಾವ್, ಪ್ರೀತಿಸಿದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು ಆ ಬಳಿಕ ಆತ ಮದುವೆಯಾಗಲು ನಿರಾಕರಿಸಿ ವಂಚಿಸಿರುವುದಾಗಿ ಆರೋಪಿಸಲಾಗಿದೆ. ಬಳಿಕದ ಬೆಳವಣಿಗೆಯಲ್ಲಿ ಸಂತ್ರಸ್ತೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಮಗುವಿಗೆ ವರ್ಷವಾಗಿದೆ.ಈ ಮಧ್ಯೆ, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭವತಿಯನ್ನಾಗಿಸಿ ವಂಚಿಸಿದ್ದ ಆರೋಪದಲ್ಲಿ ಕೃಷ್ಣ ಜೆ.ರಾವ್ ವಿರುದ್ಧ ಕಲಂ 64(2) (ಎಂ) ಮತ್ತು 69 ಬಿಎನ್ಎಸ್ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣಜೆ.ರಾವ್‌ನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗೆ ಬಳಿಕ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಈ ಕುರಿತು ನ್ಯಾಯಪೀಠಕ್ಕೆ ವರದಿ ಸಲ್ಲಿಕೆಯಾಗಿದ್ದು ಮುಂದಿನ ವಿಚಾರಣೆ ಸೆ.11ಕ್ಕೆ ಸಂಜೆ ಗಂಟೆ 4.30ಕ್ಕೆ ನಡೆಯಲಿದೆ.
ಪ್ರಕರಣ ರದ್ದತಿಗೆ ಹೈಕೋರ್ಟ್‌ಗೆ ಅರ್ಜಿ: ಸಂತ್ರಸ್ತ ಯುವತಿ ನೀಡಿದ್ದ ದೂರಿನ ಆಧಾರದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣದ ಮುಂದಿನ ಎಲ್ಲ ಪ್ರಕ್ರಿಯೆಗಳನ್ನು ರದ್ದುಪಡಿಸುವಂತೆ ಕೋರಿ ಆರೋಪಿ ಕೃಷ್ಣ ಜೆ.ರಾವ್ ಹಿರಿಯ ವಕೀಲ ಪಿ.ಪಿ.ಹೆಗ್ಡೆ ಅವರ ಮೂಲಕ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆತ್ತಿಕೊಂಡ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣದ ಮುಂದಿನ ವಿಚಾರಣೆಗೆ ಷರತ್ತಿನೊಂದಿಗೆ ಮಧ್ಯಂತರ ತಡೆಯಾಜ್ಞೆ ನೀಡಿ ಏ.24ರಂದು ಆದೇಶಿಸಿತ್ತು.
ತಿಂಗಳಿಗೆ 75 ಸಾವಿರ ರೂ.ನೀಡಲು ಆದೇಶ: ಅರ್ಜಿಯನ್ನು ಆಲಿಸಿದ್ದ ನ್ಯಾಯಪೀಠ, ಒಂದು ವೇಳೆ ಈ ಪ್ರಕರಣವು ಕೇವಲ ಇಬ್ಬರ ನಡುವಿನ ಒಮ್ಮತದ ಸಂಬಂಧವಾಗಿದ್ದು, ಮಗು ಜನಿಸುವ ಹಂತಕ್ಕೆ ತಲುಪದೆ ಇದ್ದಿದ್ದರೆ ಹಾಗೂ ತಾಯಿ-ಮಗು ಸಂಕಷ್ಟಕ್ಕೆ ಸಿಲುಕದೆ ಇದ್ದಿದ್ದರೆ, ಈ ನ್ಯಾಯಾಲಯ ಪ್ರಕರಣದ ಪ್ರಕ್ರಿಯೆಗಳಿಗೆ ಸಂಪೂರ್ಣ ತಡೆಯಾಜ್ಞೆ ನೀಡುತ್ತಿತ್ತು. ಆದರೆ, ಈಗ ಪರಿಸ್ಥಿತಿ ಭಿನ್ನವಾಗಿದೆ.ಸಂತ್ರಸ್ತೆಯ ಪೋಷಕರು ಮಗುವನ್ನು ನೋಡಿಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ಅರ್ಜಿದಾರರ ಕೃತ್ಯಗಳಿಂದಾಗಿ ಸಂತ್ರಸ್ತ ಮತ್ತು ಮಗು ಇಂದು ಸಂಕಷ್ಟದಲ್ಲಿದ್ದಾರೆ. ಆದ್ದರಿಂದ, ಈ ಪ್ರಕರಣ ಇತ್ಯರ್ಥವಾಗುವವರೆಗೆ ಅರ್ಜಿದಾರ ಆರೋಪಿಯು ಸ್ವತಃ ಅಥವಾ ತನ್ನ ಪೋಷಕರ ಮೂಲಕ ಸಂತ್ರಸ್ತೆ ಹಾಗೂ ಮಗುವಿನ ಅಗತ್ಯತೆಗಳನ್ನು ಪೂರೈಸಲು ಪ್ರತಿ ತಿಂಗಳು 75 ಸಾವಿರ ರೂ. ಪಾವತಿಸಬೇಕು ಎಂಬ ಷರತ್ತಿಗೆ ಒಳಪಟ್ಟು ಅರ್ಜಿದಾರರ ವಿರುದ್ಧದ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದ್ದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತ್ತು.
ರಾಜಿ ಸಂಧಾನದ ಪ್ರಸ್ತಾವನೆ ಪುರಸ್ಕರಿಸಿದ ಹೈಕೋರ್ಟ್: ಮುಂದಿನ ಹಂತದಲ್ಲಿ ನಡೆದ ಅರ್ಜಿಯ ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಪಿ.ಪಿ. ಹೆಗ್ಡೆ ಅವರು, ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಕುರಿತು ಕೋರ್ಟ್ ಮುಂದೆ ಪ್ರಸ್ತಾಪಿಸಿದ್ದರು. ಇದನ್ನು ಪುರಸ್ಕರಿಸಿದ್ದ ನ್ಯಾಯಾಲಯ, ಜೂ.19ರಂದು ಸಂತ್ರಸ್ತೆ, ಆರೋಪಿ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ವ್ಯಕ್ತಿಗಳು ಕಡ್ಡಾಯವಾಗಿ ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಜರಾಗಬೇಕು ಎಂದು ಸೂಚನೆ ನೀಡಿತ್ತು.ರಾಜಿ ಸಂಧಾನದ ಮಧ್ಯಸ್ಥಿಕೆದಾರರಾಗಿ ಪದಾಂಕಿತ ಹಿರಿಯ ವಕೀಲೆ ಎಸ್.ಸುಶೀಲಾ ಅವರನ್ನು ನೇಮಕಗೊಳಿಸಿತ್ತು. ಸಂತ್ರಸ್ತೆ ಮತ್ತು ಆಕೆಯ ತಾಯಿ ಹಾಗೂ ಆರೋಪಿ ಶ್ರೀಕೃಷ್ಣ ಜೆ.ರಾವ್ ಅವರ ತಂದೆ ಪಿ.ಜಿ.ಜಗನ್ನಿವಾಸ್ ರಾವ್ ಮತ್ತು ಚಂದ್ರಶೇಖರ್ ರಾವ್ ಅವರು ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಜರಾಗಿದ್ದರು.
ಆರೋಪಿ ಶ್ರೀಕೃಷ್ಣ ಜೆ.ರಾವ್ ವೀಡಿಯೋ ಕಾನ್ಸರೆನ್ಸ್ ಮೂಲಕ ಹಾಜರಾಗಿದ್ದ ಹಾಜರಾಗಲು ಅವಕಾಶಕ್ಕಾಗಿ ನ್ಯಾಯಪೀಠ ಮಧ್ಯಸ್ಥಿಕೆ ಕೇಂದ್ರದ ಕಾರ್ಯನಿರ್ವಹಣೆ ಮುಂದುವರಿಸಿ ಅವಕಾಶ ನೀಡಿತ್ತು.ಈ ಮಧ್ಯೆ, ಆರೋಪಿಯು ಸಂತ್ರಸ್ತೆ ಮತ್ತು ಮಗುವಿನ ಅಗತ್ಯತೆಗಳನ್ನು ಪೂರೈಸಲು ಪ್ರತಿತಿಂಗಳು ನೀಡಬೇಕಾದ ರೂ.75 ಸಾವಿರವನ್ನು ಪ್ರತಿ ತಿಂಗಳ 5ರೊಳಗೆ ಕಡ್ಡಾಯವಾಗಿ ನೀಡಬೇಕು.



