ಕಾಂಗ್ರೆಸ್ ಮುಖಂಡ, ಗುತ್ತಿಗೆದಾರ, ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಅವರನ್ನು ಹಾಡ ಹಗಲೇ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಇಂದು ಮಧ್ಯಾಹ್ನ (ಆ.7) ಪಡುಬಿದ್ರಿ ಸಮೀಪದ ಮುದರಂಗಡಿಯಲ್ಲಿ ಸಂಭವಿಸಿದೆ.
ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಡೇವಿಡ್ ಡಿಸೋಜ ಅವರ ಮೇಲೆ ಗುಂಡಿನ ದಾಳಿ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಆಗಮಿಸಿದ್ದು, ತನಿಖೆ ಮುಂದುವರಿದಿದೆ.