Connect with us

ಸ್ಥಳೀಯ

ಮಳೆ ಹಿನ್ನಲೆ – ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕಿಗೆ ನಾಳೆ (ಆ.8) ರಜೆ ಘೋಷಣೆ

Published

on

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ತುರ್ತು ಆದೇಶ ​ಮಂಗಳೂರು: ಜಿಲ್ಲೆಯಲ್ಲಿ ಮುಂದುವರಿದಿರುವ ಮಳೆಯ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ಪರಿಗಣಿಸಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಆದೇಶ ಹೊರಡಿಸಿದೆ. ​ಪುತ್ತೂರು ಉಪವಿಭಾಗದ ತಹಶೀಲ್ದಾರರ ಮನವಿಯ ಮೇರೆಗೆ, ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು (12ನೇ ತರಗತಿವರೆಗೆ) ಹಾಗೂ ಎಲ್ಲಾ ಐಟಿಐ (ITI) ಮತ್ತು ಡಿಪ್ಲೋಮಾ (Diploma) ಕಾಲೇಜುಗಳಿಗೆ (ಎಲ್ಲಾ ವಸತಿ ಶಾಲಾ-ಕಾಲೇಜುಗಳು ಸೇರಿದಂತೆ) ಆ 08 ರಂದು ಅಧಿಕೃತವಾಗಿ ರಜೆಯನ್ನು ಘೋಷಿಸಲಾಗಿದೆ

 
 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version