Published
3 hours agoon
By
Akkare News

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ರಾಜು ಎಂಬಾತನನ್ನು ಕಾಪು ಪಿಎಸ್ಐ ತೇಜಸ್ವಿ ಹಾಗೂ ಕಾರ್ಕಳ ಗ್ರಾಮಾಂತರ ಪಿಎಸ್ಐ ಪ್ರಸನ್ನ ಅವರ ಜಂಟಿ ತಂಡ ಬಂಧಿಸಿ ಕರೆತರುತ್ತಿತ್ತು. ಬೈಂದೂರು ಸಮೀಪದ ಒತ್ತಿನೆಣೆ ಬಳಿ ತಲುಪುತ್ತಿದ್ದಂತೆ ಆರೋಪಿ ರಾಜು, ಪೊಲೀಸರ ಮೇಲೆ ಏಕಾಏಕಿ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಈ ವೇಳೆ ತಕ್ಷಣವೇ ಕಾರ್ಯಪ್ರವೃತ್ತರಾದ ಕಾಪು ಪಿಎಸ್ಐ ತೇಜಸ್ವಿ ಅವರು ತಮ್ಮ ಸರ್ವೀಸ್ ಪಿಸ್ತೂಲ್ನಿಂದ ಆರೋಪಿಯ ಕಾಲಿಗೆ ಗುಂಡು ಹೊಡೆದು ಆತನನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಯ ದಾಳಿಯಿಂದ ಪಿಎಸ್ಐ ತೇಜಸ್ವಿ ಅವರಿಗೂ ಗಾಯಗಳಾಗಿದ್ದು, ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹರಿರಾಮ್ ಶಂಕರ್ ಭೇಟಿ ನೀಡಿ ಪಿಎಸ್ಐ ತೇಜಸ್ವಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಘಟನೆ ನಡೆದ ತಕ್ಷಣವೇ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಮೆಟ್ಟಿಜಜ್ಜಿದ ಪೊಲೀಸ್ ತಂಡದ ಕ್ಷಿಪ್ರ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಶ್ಲಾಘನೆ ವ್ಯಕ್ತವಾಗಿದೆ. ಕೃತ್ಯದಲ್ಲಿದ್ದ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಜಾಲ ಬೀಸಿದ್ದಾರೆ.




