Connect with us

ಇತರ

ಯುವವಾಹಿನಿ ಮಾಣಿ ಘಟಕದಿಂದ ಆಂಬ್ಯುಲೆನ್ಸ್ ಸೇವೆಗೆ ಚಾಲನೆ

Published

on

ಮಾಣಿ: ಮಾಣಿ ಪರಿಸರದ ಜನರ ಬಹುಕಾಲದ ನಿರೀಕ್ಷೆಯಾಗಿದ್ದ ಆಂಬ್ಯುಲೆನ್ಸ್ ಸೇವೆಯನ್ನು ಒದಗಿಸುವ ಮಹತ್ವದ ಯೋಜನೆಗೆ ಯುವವಾಹಿನಿ (ರಿ.) ಮಾಣಿ ಘಟಕ ಮುಂದಾಗಿದೆ. ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಆಯೋಜಿಸಲಾಗಿದ್ದ ‘ಆಟಿ ಸಿರಿ ಸಂಭ್ರಮ – 2026’ ಕಾರ್ಯಕ್ರಮದ ವೇದಿಕೆಯಲ್ಲಿ ಆಂಬ್ಯುಲೆನ್ಸ್ ಸೇವೆಯ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ತುರ್ತು ಆರೋಗ್ಯ ಸಂದರ್ಭಗಳಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ತ್ವರಿತವಾಗಿ ವೈದ್ಯಕೀಯ ನೆರವು ದೊರೆಯುವಂತೆ ಮಾಡುವ ಉದ್ದೇಶದಿಂದ ಈ ಸೇವೆಯನ್ನು ಆರಂಭಿಸಲಾಗುತ್ತಿದೆ. ಸಮಾಜಮುಖಿ ಕಾರ್ಯವಾಗಿ ರೂಪುಗೊಳ್ಳುತ್ತಿರುವ ಈ ಯೋಜನೆಯು ಮಾಣಿ ಹಾಗೂ ಸುತ್ತಮುತ್ತಲಿನ ಜನರಿಗೆ ಅತ್ಯಂತ ಉಪಯುಕ್ತವಾಗಲಿದೆ. ಈ ಸಂದರ್ಭದಲ್ಲಿ ಮಾತನಾಡಿದ ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷ ಗಣೇಶ್ ಪೂಜಾರಿ, “ಆರೋಗ್ಯದ ತುರ್ತು ಸಂದರ್ಭದಲ್ಲಿ ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಸೇವೆ ದೊರೆಯುವುದು ಅತ್ಯಂತ ಅಗತ್ಯ. ಜನರ ಬಹುಕಾಲದ ನಿರೀಕ್ಷೆಯಾಗಿದ್ದ ಈ ಸೇವೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಯುವವಾಹಿನಿ ಮಾಣಿ ಘಟಕ ಕಾರ್ಯೋನ್ಮುಖವಾಗಿದೆ. ಈ ಮಹತ್ಕಾರ್ಯವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಸಮಾಜದ ಎಲ್ಲರ ಸಹಕಾರ ಮತ್ತು ಸಹಭಾಗಿತ್ವ ಅಗತ್ಯ,” ಎಂದರು.ಈ ಸಂದರ್ಭದಲ್ಲಿ ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ತನಿಯಪ್ಪ ಪೂಜಾರಿ, ಯುವವಾಹಿನಿ (ರಿ.) ಮಾಣಿ ಘಟಕದ ಸಲಹೆಗಾರರಾದ ಲೋಕನಾಥ ತಿಮರಾಜೆ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಇದರ ಅಧ್ಯಕ್ಷರಾದ ನಾರಾಯಣ ಸಾಲಿಯಾನ್, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು, ಸಂಘಟನಾ ಕಾರ್ಯದರ್ಶಿಯಾದ ಸೋಮಸುಂದರ್ , ಪೆರ್ನೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಕೇಶವ ಸುಣ್ಣಾ ನ, ಯುವವಾಹಿನಿ ಮಾಣಿ ಘಟಕದ ಮಾಜಿ ಅಧ್ಯಕ್ಷರಾದ ರಾಜೇಶ್, ಹರೀಶ್ ಪೂಜಾರಿ ಬಾಕಿಲ, ರಮೇಶ್ ಮುಜಾಲ, ಪ್ರಶಾಂತ ಅನಂತಾಡಿ, ಜಯಂತ ಬರಿಮಾರು, ನಾಗೇಶ್ ಪೆರಾಜೆ ಹಾಗೂ ಶಿವರಾಜ್ ಅನಂತಾಡಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.ವವಾಹಿನಿ (ರಿ.) ಮಾಣಿ ಘಟಕದ ಕಾರ್ಯದರ್ಶಿ ವಿಶ್ವನಾಥ ಪೂಜಾರಿ, ಕೋಶಾಧಿಕಾರಿ ಡಾ. ತ್ರಿವೇಣಿ ರಮೇಶ್, ಉಪಾಧ್ಯಕ್ಷರಾದ ಸುಜಿತ್ ಅಂಚನ್ ಸದಸ್ಯರಾದ ವಿಕ್ರಂ ಬಿಳಿಯೂರು ಶುಭ ಪೆರ್ನೆ ಹಾಗೂ ಘಟಕದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

 
 

Continue Reading
Click to comment

Leave a Reply

Your email address will not be published. Required fields are marked *

Advertisement