ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ವತಿಯಿಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇಲ್ಲಿ ದಿನಾಂಕ 05-08-2026 ರಂದು ನಡೆದ 2026- 27ನೇ ಸಾಲಿನ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ತಾಲೂಕು ಮಟ್ಟದ ಕರಾಟೆ ಪಂದ್ಯಾಟಗಳಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಇದರ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಬೆಳ್ಳಿ ಪದಕಗಳು ಲಭಿಸಿವೆ. 56 ಕೆ.ಜಿ. ವಿಭಾಗದಲ್ಲಿ ಜಗತಿ, 50 ಕೆ.ಜಿ. ವಿಭಾಗದ ಸ್ಪರ್ಧೆಯಲ್ಲಿ ತೃಷ್ಯಾ, 46 ಕೆ.ಜಿ. ವಿಭಾಗದಲ್ಲಿ ಧನ್ಶಿಕಾ, 38 ಕೆ.ಜಿ. ವಿಭಾಗದಲ್ಲಿ ಲಿಪಿಕಾ ಬೆಳ್ಳಿ ಪದಕಗಳನ್ನು ಪಡೆದುಕೊಂಡಿರುತ್ತಾರೆ.