Published
8 hours agoon
By
Akkare News
ಘಟನೆ ನಡೆದ ವೇಳೆ ಮನೆಯಲ್ಲಿದ್ದ ಸಿದ್ದಿಕ್ ಅವರ ಪತ್ನಿ ಆರಿಫಾ ಅವರು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪ್ರಾಣಪಾಯದಿಂದ ಪಾರಾಗಿದ್ದಾರೆ. ಫ್ರಿಡ್ಜ್ನಲ್ಲಿ ತಾಂತ್ರಿಕ ದೋಷ ಅಥವಾ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡು ಭಾರಿ ಶಬ್ದದೊಂದಿಗೆ ಸ್ಫೋಟಗೊಂಡಿದೆ ಎನ್ನಲಾಗಿದೆ.
ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳು, ಮೇಲ್ಚಾವಣಿ ಹಾಗೂ ಪೀಠೋಪಕರಣಗಳಿಗೆ ತೀವ್ರ ಹಾನಿಯಾಗಿದೆ. ಸ್ಫೋಟದ ಬೆನ್ನಲ್ಲೇ ಮನೆಯೊಳಗೆ ಬೆಂಕಿ ವ್ಯಾಪಿಸಿದ್ದರಿಂದ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಫ್ರಿಡ್ಜ್ನಿಂದ ಹೊಗೆ ಹಾಗೂ ಬೆಂಕಿ ಬರುತ್ತಿರುವುದನ್ನು ಗಮನಿಸಿದ ಆರಿಫಾ ಅವರು ಕೂಡಲೇ ಸಮಯಪ್ರಜ್ಞೆ ಮೆರೆದು ಮನೆಯಿಂದ ಹೊರಗೆ ಓಡಿ ಬಂದು ಅಪಾಯದಿಂದ ಪಾರಾಗಿದ್ದಾರೆ.
ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಬೆಂಕಿ ನಂದಿಸಲು ನೆರವಾಗಿದ್ದಾರೆ.



