ಬೆಂಗಳೂರು: ಕರ್ನಾಟಕ ಸರ್ಕಾರವು (ಕರ್ನಾಟಕ ಗವರ್ನಮೆಂಟ್ ) ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ (Gutkha and Pan Masala) ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿದೆ. ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಸೆಕ್ಷನ್ 30(2)(a) ಹಾಗೂ ಆಹಾರ ಭದ್ರತೆ ಮತ್ತು ಗುಣಮಟ್ಟ (ಮಾರಾಟ ನಿಷೇಧ ಮತ್ತು ನಿರ್ಬಂಧಗಳು) ನಿಯಮಾವಳಿಗಳು-2011 ರ ನಿಯಮ 2.3.4 ರ ಅಡಿಯಲ್ಲಿ ರಾಜ್ಯ ಆಹಾರ ಸುರಕ್ಷತಾ ಆಯುಕ್ತರು ಈ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದಾರೆ.