Connect with us

ಇತರ

ಮಂಗಳೂರು: ಕೋರ್ದಬ್ಬು ದೈವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳವು ಪ್ರಕರಣ; ಆರೋಪಿಯ ಬಂಧನ

Published

on

ಮಂಗಳೂರು: ಸುರತ್ಕಲ್ ಸಮೀಪದ ಮಧ್ಯ ಕೊಡಿಪಾಡಿಯ ಕೋರ್ದಬ್ಬು ದೈವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳವು ಮಾಡಿದ ಪ್ರಕರಣದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಉಡುಪಿ ಜಿಲ್ಲೆಯ ಕುಕ್ಕಿಹಳ್ಳಿ ಗ್ರಾಮದ ಬೆಲ್ಲಪ್ಪಳ್ಳಿ ಸುಖೇಶ್ ನಾಯ್ಕ (40) ಎಂದು ತಿಳಿದು ಬಂದಿದೆ.

ಆ. 5ರಂದು ಮುಂಜಾನೆ ಅಪರಿಚಿತ ವ್ಯಕ್ತಿಯೊಬ್ಬ ಕಬ್ಬಿಣದ ಆಯುಧದಿಂದ ದೈವಸ್ಥಾನದ ಬಾಗಿಲು ಹಾಗೂ ಕಿಟಕಿಯನ್ನು ಮುರಿದು ಒಳನುಗ್ಗಿ ಕಾಣಿಕೆ ಹುಂಡಿಯನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದ ಹುಂಡಿಯಲ್ಲಿದ್ದ 15 ಸಾವಿರ ರೂ. ನಗದು ಹಣ ಕಳವಾಗಿರುವುದು ತನಿಖೆಯಿಂದ ತಿಳಿದುಬಂದಿತ್ತು.

ಈ ಕುರಿತು ಸುರತ್ಕಲ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದ ಪೊಲೀಸರಿಗೆ ಆರೋಪಿಯು ಸೋಮವಾರ ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿರುವುದು ತಿಳಿದು ಬಂದಿತ್ತು.

ತಕ್ಷಣ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ನಡೆಸಿರುವುದನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಆರೋಪಿಯನ್ನು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ವಿಚಾರಣೆ ವೇಳೆ ಆರೋಪಿಯ ಅಪರಾಧ ಹಿನ್ನೆಲೆ ಬೆಳಕಿಗೆ ಬಂದಿದ್ದು, ಈತನ ವಿರುದ್ಧ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 18 ಕಳವು ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಈಗಾಗಲೇ ಒಂದು ಪ್ರಕರಣದಲ್ಲಿ ಈತನಿಗೆ ಶಿಕ್ಷೆಯಾಗಿದ್ದು, ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಿಂದ ಈತನ ವಿರುದ್ಧ ನ್ಯಾಯಾಲಯದ ದಸ್ತಗಿರಿ (ಬಂಧನ) ವಾರಂಟ್‌ಗಳು ಸಹ ಬಾಕಿ ಇರುವುದು ಪತ್ತೆಯಾಗಿದೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement