ಸ್ವಾತಂತ್ರ್ಯ ಚಳುವಳಿಯಲ್ಲಿ ಪರಿಣಾಮಕಾರಿಯಾಗಿ ಕಾರ್ಯರೂಪಕ್ಕೆ ಬಂದ ಉದಾತ್ತ ಆಲೋಚನೆಗಳು ಎಂದಿಗೂ ಮೌಲ್ಯಯುತವಾದವುಗಳು. ಅಂತಹ ಉದಾತ್ತ ಯೋಚನೆಗಳನ್ನು ಇಂದಿನ ಯುವಜನತೆ ತಮಗೆ ಮಾರ್ಗದರ್ಶಿಯಾಗಿ ಅಳವಡಿಸಿಕೊಳ್ಳಬೇಕು ” ಎಂದು ಶಾಸಕರಾದ ಅಶೋಕ್ ಕುಮಾರ್ ರೈ ನುಡಿದರು. ಅವರು ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಇಲ್ಲಿ 80 ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರೆವೇರಿಸಿ ಶುಭಸಂದೇಶ ನೀಡಿದರು. ” ವಿದ್ಯಾರ್ಥಿ ದೆಸೆಯ ಬದುಕು ಕನಸುಗಳನ್ನು ನನಸಾಗಿಸುವ ಪ್ರಯತ್ನಗಳಿಗೆ ಸ್ಪಷ್ಟ ದಾರಿ ತೋರಿಸುವ ಹಂತ.ಹಾಗಾಗಿ ಇಲ್ಲಿ ಆದರ್ಶತೆಯ ಮಾದರಿ ಹಾಗೂ ಯೋಚನೆಗಳನ್ನು ವಿದ್ಯಾರ್ಥಿಗಳು ತಮ್ಮದಾಗಿಸಿಕೊಳ್ಳಬೇಕು” ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪ್ರಸಾದ್ ಕೌಶಲ್ ಶೆಟ್ಟಿ, ಪ್ರೌಢಶಾಲಾ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಭಾಸ್ಕರ ರಾವ್ ಭಾಗವಹಿಸಿ ಶುಭಹಾರೈಸಿದರು. ಪದವಿಪೂರ್ವ ವಿಭಾಗದ ಪ್ರಾಂಶುಪಾಲರಾದ ಗೋಪಾಲ ಗೌಡ ಸ್ವಾಗತಿಸಿದರು. ಪ್ರೌಢಶಾಲಾ ವಿಭಾಗದ ಪ್ರಭಾರ ಉಪಪ್ರಾಂಶುಪಾಲರಾದ ನಾಗರಾಜ್ ಭಟ್ ವಂದಿಸಿದರು. ಸಹಶಿಕ್ಷಕ ಗ್ರೆಗೊರಿ ರೋನಿ ಪಾಯ್ಸ್ ಕಾರ್ಯಕ್ರಮ ನಿರೂಪಿಸಿದರು. ಪ್ರಶಾಂತ್ ಅನಂತಾಡಿ ಸ್ಪರ್ಧಾ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಶಾಲಾ ಎಸ್.ಸಿ.ಸಿ.ಘಟಕದ ವಿದ್ಯಾರ್ಥಿಗಳು ಶಾಸಕರಿಗೆ ಗೌರವ ವಂದನೆಯನ್ನು ಸಲ್ಲಿಸಿದರು. ಶಾಲಾಭಿವೃದ್ಧಿ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದ ಸುರೇಶ್ ರೈ ಪಡ್ಡಂಬೈಲು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಕಾಲೇಜು ಉಪನ್ಯಾಸಕ ವೃಂದ, ಪ್ರೌಢಶಾಲಾ ಶಿಕ್ಷಕ ವೃಂದ, ಬೋಧಕೇತರ ಸಿಬ್ಬಂದಿ ಹಾಗೂ ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.