Published
2 hours agoon
By
Akkare News
ಕೌಡೂರು ರಂಗನಪಲ್ಕೆಯ ಅಶೋಕ್ ಜಾಕೋಬ್ ಸಲ್ದಾನ ಮತ್ತು ಮರಿಯಾ ಗ್ರೆಟ್ಟಾ ಸಲ್ದಾನ ದಂಪತಿಯ ಪುತ್ರಿಯಾಗಿರುವ ಶೈನಿ ಅಸ್ಮಾ, ಕಾರ್ಕಳದ ಕ್ರೈಸ್ಟ್ಕಿಂಗ್ ವಿದ್ಯಾಸಂಸ್ಥೆಯಲ್ಲಿ ಪಿಯುಸಿ ಶಿಕ್ಷಣ ಪೂರ್ಣಗೊಳಿಸಿದ್ದಾರೆ.
ಬಳಿಕ ಬೆಂಗಳೂರಿನಲ್ಲಿ ಇಂದಿರಾಗಾಂಧಿ ರಾಷ್ಟ್ರೀಯ ಉಡಾನ್ ಅಕಾಡೆಮಿಯ ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆಯಾದ ಅವರು, 2023ರ ಆಗಸ್ಟ್ನಿಂದ ಉತ್ತರ ಪ್ರದೇಶದ ಫುರ್ಸತ್ಗಂಜ್ನಲ್ಲಿರುವ ಇಂದಿರಾಗಾಂಧಿ ರಾಷ್ಟ್ರೀಯ ಉಡಾನ್ ಅಕಾಡೆಮಿಯಲ್ಲಿ ಪೈಲಟ್ ತರಬೇತಿ ಪಡೆದರು.
ಕಠಿಣ ತರಬೇತಿ ಹಾಗೂ ಪರಿಶ್ರಮದ ಬಳಿಕ ಇದೀಗ ಕಮರ್ಷಿಯಲ್ ಪೈಲಟ್ ಲೈಸೆನ್ಸ್ ಪಡೆದುಕೊಂಡಿರುವ ಶೈನಿ ಅಸ್ಮಾ ಸಲ್ದಾನ ಅವರ ಸಾಧನೆಗೆ ಕುಟುಂಬಸ್ಥರು ಹಾಗೂ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ.



