Published
4 hours agoon
By
Akkare News
ಧ್ವಜಾರೋಹಣದ ಬಳಿಕ ರಾಷ್ಟ್ರಗೀತೆ ಹಾಗೂ ಧ್ವಜಗೀತೆಗಳನ್ನು ಹಾಡಿ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಿಬ್ಬಂದಿ ಹಾಗೂ ಉಪಸ್ಥಿತರಿದ್ದವರು ದೇಶಭಕ್ತಿಯ ಭಾವನೆಯೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮಾತನಾಡಿದ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಲಕ್ಷ್ಮೀಕಾಂತ್ ಬಿ. ಆಚಾರ್ಯ ಅವರು, ದೇಶದ ಬಗ್ಗೆ ಗೌರವ, ದೇಶಾಭಿಮಾನ ಹಾಗೂ ರಾಷ್ಟ್ರಭಕ್ತಿಯನ್ನು ಪ್ರತಿಯೊಬ್ಬರೂ ತಮ್ಮ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಂಡು, ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಯುವ ಪೀಳಿಗೆಯಲ್ಲಿ ದೇಶಾಭಿಮಾನ ಹಾಗೂ ರಾಷ್ಟ್ರಪ್ರೇಮವನ್ನು ಬೆಳೆಸುವ ಅಗತ್ಯವಿದೆ ಎಂದು ಅವರು ತಿಳಿಸಿದರು. ಇದೇ ಸಂದರ್ಭದಲ್ಲಿ ಎಲ್ಲರಿಗೂ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ಕೋರಿದರು.



