Published
2 hours agoon
By
Akkare News
ಬಸ್ ನಿಲ್ದಾಣದ ಬಳಿಯಿರುವ ಗಾಂಧೀಕಟ್ಟೆಯಲ್ಲಿ ನಡೆದ ದೇಶದ 80ನೇ ಸ್ವಾತಂತ್ರೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ರಾಜಕೀಯ ವ್ಯಕ್ತಿಗಳ ಭಾಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯವಿಲ್ಲ. ದೇಶ ಉನ್ನತ ಸ್ಥಾನಕ್ಕೆ ಏರಲೂ ಸಾಧ್ಯವಿಲ್ಲ. ಮಕ್ಕಳು ಉತ್ತಮ ವಿದ್ಯಾವಂತರಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಿದ್ದು ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ನೀಡಬೇಕು ಎಂದು ಹೇಳಿದರು.
ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗಿಸ್, ತಹಶೀಲ್ದಾರ್ ಎಸ್.ಬಿ ಕೂಡಲಗಿ, ನಗರ ಯೋಜನಾ ಪ್ರಾಧೀಕಾರದ ಸದಸ್ಯ ನಿಹಾಲ್ ಶೆಟ್ಟಿ, ಗಾಂಧೀಕಟ್ಟೆ ಸಮಿತಿಯ ಸಯ್ಯದ್ ಕಮಲ್, ದಾಮೋದರ ಭಂಡಾರ್‌ಕರ್, ಸಾಹಿರಾ ಬಾನು ಮೊದಲಾದವರು ಉಪಸ್ಥಿತರಿದ್ದರು. ಗಾಂಧೀಕಟ್ಟೆ ಸಮಿತಿ ಸಂಚಾಲಕ ಕೃಷ್ಣಪ್ರಸಾದ್ ಆಳ್ವ ಸ್ವಾಗತಿಸಿ, ಜಗನ್ನಾಥ ರೈ ಸೂತ್ರಬೆಟ್ಟು ವಂದಿಸಿದರು.



