Published
4 hours agoon
By
Akkare News
ಕುಮಾರಮಂಗಿಲ ಬಳಿಯ ಬಂಬಿಲ ನಿವಾಸಿ ಅಭಿಲಾಷ್(24) ಮೃತರು.
ಮಾಹಿತಿ ಪ್ರಕಾರ, ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸವಣೂರಿನಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ.
ಈ ಅಪಘಾತದಲ್ಲಿ ಅಭಿಲಾಷ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಅಪಘಾತದ ಬಳಿಕ ಸ್ಥಳದಲ್ಲಿ ಜನರು ಜಮಾಯಿಸಿದರು. ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ. ಪುತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.



