ಪುತ್ತೂರು-ಉಪ್ಪಿನಂಗಡಿ ರಸ್ತೆಯ ದಾರಂದಕುಕ್ಕುವಿನಲ್ಲಿ ಜೀಪೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಆ.16ರಂದು ಬೆಳಗ್ಗೆ ನಡೆದಿದೆ. ಈಶ್ವರಮಂಗಲದಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಜೀಪು ಚಾಲಕನ ನಿಯಂತ್ರಣ ತಪ್ಪಿ ದಾರಂದಕುಕ್ಕುವಿನಲ್ಲಿ ಚರಂಡಿಗೆ ಬಿದ್ದಿದೆ.ಅಪಘಾತದಲ್ಲಿ 6 ವರ್ಷದ ಮಗು ಸೇರಿದಂತೆ ಆರು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.