Connect with us

ಇತರ

ಪುತ್ತೂರು: ಭಾರತ್ ಜೋಡೋ ಯುವ ಸಂಘಕ್ಕೆ ಅರ್ಜಿ ಆಹ್ವಾನ

Published

on

ಪುತ್ತೂರು: ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯ ಉತ್ತೇಜಿಸಲು ಕರ್ನಾಟಕ ಸರ್ಕಾರ ಭಾರತ್‌ ಜೋಡೋ ಯುವ ಸಂಘ ರಚಿಸಲು ಮುಂದಾಗಿದೆ.ಮಾನ್ಯ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ, ನಗರ ವಾರ್ಡ್ ಗಳಲ್ಲಿ 8000 ಜನಸಂಖ್ಯೆಗೆ ಅನುಗುಣವಾಗಿ ಒಂದು ಭಾರತ್‌ ಜೋಡೋ ಯುವ ಸಂಘ ಸ್ಥಾಪಿಸಲು ಉದ್ದೇಶಿಸಲಾಗಿದೆ. ಅದರಂತೆ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ವಾರ್ಡ್ ವಾರು 7 ಸಂಘಗಳನ್ನು ರಚಿಸಬೇಕು.ಈ ಸಂಘಗಳಿಗೆ ತಮ್ಮ ತಮ್ಮ ವಾರ್ಡ್ ನಲ್ಲಿ ಇರುವ 16 ರಿಂದ 35 ವರ್ಷದ ಒಳಗಿನ ಯುವಕರಿಗೆ ಸದಸ್ಯರಾಗುವ ಅವಕಾಶವಿರುತ್ತದೆ. ಆಸಕ್ತ ಯುವಕರುವೆಬ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಈ ಮಾಹಿತಿಯನ್ನು ಪುತ್ತೂರು ನಗರಸಭೆಯ ಪೌರಾಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version