Published
7 hours agoon
By
Akkare News
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಮುಂದಿನ ದಿನಗಳಲ್ಲೂ ಮುಂದುವರಿಯುವ ನಿರೀಕ್ಷೆಯಿದೆ.
ಕಲಬುರಗಿ, ವಿಜಯಪುರ, ಬಾಗಲಕೋಟೆ, ಗದಗ, ರಾಯಚೂರು ಹಾಗೂ ಧಾರವಾಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಇದರೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಬೀದರ್, ಹಾವೇರಿ, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವು ಭಾಗಗಳಲ್ಲೂ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮಳೆಯಾಗಬಹುದು.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಈ ಜಿಲ್ಲೆಗಳ ಹಲವು ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಕೆಲವೆಡೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ.



