Connect with us

ಇತ್ತೀಚಿನ ಸುದ್ದಿಗಳು

ಜಿಲ್ಲೇಯಲ್ಲಿ ಹೆಚ್ಚಿದ ಗಾಂಜಾದ ಘಾಟು …!!! ಮಾದಕ ದ್ರವ್ಯದ ವಿರುದ್ಧ ಸಮರ ಸಾರಿರುವ ಮಂಗಳೂರು ಪೊಲೀಸರು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೈ ಮಾಡುತ್ತಿದ್ದ ಆಯುರ್ವೇದ ತೆರಪಿಸ್ಟ್ ಸಹಿತ ಮೂವರ ಬಂಧನ

Published

on

ಮಂಗಳೂರು ನಗರದಲ್ಲಿ ಮಾದಕ ವಸ್ತು ಮಾರಾಟದ ವಿರುದ್ಧ ಸಮರ ಸಾರಿರುವ ಮಂಗಳೂರು ಪೊಲೀಸರು ನಿರಂತರವಾಗಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿ ಜೈಲಿಗೆ ಅಟ್ಟುತ್ತಿದ್ದಾರೆ. ಅಗಸ್ಟ್ 18 ರಂದು ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್ ವೆಲ್ ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯ ಬದಿಯಲ್ಲಿ ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಕೇರಳ ಮೂಲದ ಆರೋಪಿ ಮುಹಮ್ಮದ್ ಇರ್ಷಾದ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ 13.69 ಗ್ರಾಂ ತೂಕದ MDMA ಮಾದಕ ವಸ್ತು, ಅಂದಾಜು ರೂ. 1,36,000/- ಮೌಲ್ಯದ MDMA, ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ ರೂ.2,94,500/- ಆಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅ.ಕ್ರ. 82/2026, ಕಲಂ 8(c), 22(c) ಎನ್.ಡಿ.ಪಿ.ಎಸ್. ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಡ್ರಗ್ ಪೆಡ್ಲರ್ ವೊಬ್ಬನ ಹೆಡೆಮುರಿ ಕಟ್ಟಲು ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಅಶ್ವಿನ್ ಕ್ಲೇವಿಯರ್ ಎಂದು ಗುರುತಿಸಲಾಗಿದೆ. ಆಗಸ್ಟ್ 17 ರಂದು ಗಾಂಜಾ ಸೇವನೆ ಮಾಡಿದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದಾಗಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ನಿತಿನ್ ಕೃಷ್ಣನ್ ಎಂಬಾತನ ವಿವರ ಬಯಲಾಗಿದೆ. ಕದ್ರಿ ಗ್ರಾಮದ ಪದವು ಮೈದಾನದ ಬಳಿ ಇರುವ ಆಯುರ್ವೇದ ಕ್ಲಿನಿಕ್ ನಲ್ಲಿ ಥೆರಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ನಿತಿನ್ ಕೃಷ್ಣನ್ ಎಂಬಾತನನ್ನು ಪತ್ತೆಹಚ್ಚಿ, ಆತನ ವಶದಲ್ಲಿದ್ದ ರೂ 60,000/- ಮೌಲ್ಯದ 1 ಕೆ.ಜಿ. 206 ಗ್ರಾಂ ತೂಕದ ಗಾಂಜಾ, ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ಹಾಗೂ ಕೆಎಲ್-86-2397 ನೋಂದಣಿ ಸಂಖ್ಯೆಯ KTM ಮೋಟಾರ್ ಸೈಕಲ್ ಅನ್ನು ಮತ್ತು ಆರೋಪಿಯ ಮೊಬೈಲ್ ಫೋನ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯ ಮೊ.ನಂ. 104/2026, ಕಲಂ 8(c), 20(b)(ii)(B), 27(b) ಎನ್.ಡಿ.ಪಿ.ಎಸ್. ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version