Connect with us

ಇತರ

ದರ್ಶನ್‌ಗೆ ಮಾಫಿ ಸಾಕ್ಷಿ ಸಂಕಷ್ಟ – ದೈವದ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ

Published

on

ಶ್ರೀಕ್ಷೇತ್ರ ಮಂದಾರಬೈಲು ಶ್ರೀರಕ್ತೇಶ್ವರಿ, ಗುಳಿಗ ದೈವ ಸನ್ನಿಧಿಯಲ್ಲಿ ಕೋಲ ಸೇವೆ

ಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ವಿರುದ್ಧ ಮಾಫಿ ಸಾಕ್ಷಿ ವಿಚಾರ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ದರ್ಶನ್ ಪತ್ನಿ ವಿಜಯಲಕ್ಷ್ಮಿ  ದೈವದ ಮೊರೆ ಹೋಗಿದ್ದಾರೆ. ಮಂಗಳೂರಿನ  ಶ್ರೀಕ್ಷೇತ್ರ ಮಂದಾರಬೈಲು ಶ್ರೀರಕ್ತೇಶ್ವರಿ ಮಂತ್ರದೇವತಾ ಹಾಗೂ ಗುಳಿಗ ದೈವದ ಸನ್ನಿಧಿಯಲ್ಲಿ ವಿಜಯಲಕ್ಷ್ಮಿ ವಿಶೇಷ ಸೇವೆ ಸಲ್ಲಿಸಿದ್ದಾರೆ. ಕೋಲ ಸೇವೆ ನಡೆಸಿ, ವಿಶೇಷ ಪೂಜೆ ಹಾಗೂ ಹರಕೆ ಸಲ್ಲಿಸಿದ್ದಾರೆ. ದರ್ಶನ್‌ಗೆ ಪ್ರದೋಷ್‌ ಮಾಫಿ ಸಾಕ್ಷಿ ಕಂಟಕವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ದೈವದ ಸನ್ನಿಧಿಯಲ್ಲಿ ಸೇವೆ ಮಾಡಿಸಿದ್ದಾರೆ. ಪ್ರಕರಣದ ಸಂಕಷ್ಟದಿಂದ ಪಾರಾಗಲು ದೈವದ ಮೊರೆ ಹೋಗಿರುವ ವಿಜಯಲಕ್ಷ್ಮಿ, ವಿಶೇಷ ಪೂಜೆ ಹಾಗೂ ಹರಕೆ ಮೂಲಕ ದೈವಾನುಗ್ರಹ ಕೋರಿದ್ದಾರೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version