Connect with us

ಇಂದಿನ ಕಾರ್ಯಕ್ರಮ

ದ್ವಾರಕಾ ಕಾರ್ಪ್. ಪ್ರೈ. ಲಿ. ಮತ್ತು ಕೆ.ವಿ. ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ ಇದರ ಸಹಯೋಗದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಮಾಹಿತಿ ಕಾರ್ಯಾಗಾರ

Published

on

ದ್ವಾರಕಾ ಕಾರ್ಪ್. ಪ್ರೈ. ಲಿ. ಮತ್ತು ಕೆ.ವಿ. ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ ಇವುಗಳ ಸಹಯೋಗದಲ್ಲಿ ಕೆಮ್ಮಾರದ ಉಜ್ಜೀವನ ಹಿರಿಯ ನಾಗರಿಕರ ಬಡಾವಣೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಮಾಹಿತಿ ಕಾರ್ಯಾಗಾರ ದಿನಾಂಕ 30-08-2026ರಂದು ನಡೆಯಿತು.
ಕಾರ್ಯಕ್ರಮವನ್ನು ಜೀವಿನ್ ಸೀನಿಯರ್ ಕೇರ್, ಬೆಂಗಳೂರು ಇದರ ಡಾ. ಮುರಳೀಧರ ಇವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ್ವಾರಕಾ ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಗೋಪಾಲಕೃಷ್ಣ ಭಟ್ಟ ಅರ್ತ್ಯಡ್ಕ ವಹಿಸಿದ್ದರು. ಪ್ರಮುಖ ಅಭ್ಯಾಗತರಾಗಿ ಕೆ. ವಿ. ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ ಇದರ ರೆಸ್ಪಿರೇಟರಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅನಿರುದ್ಧ ಉಪಸ್ಥಿತರಿದ್ದರು. ದ್ವಾರಕಾ ಸಮೂಹ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಶ್ರೀ ಅಮೃತಕೃಷ್ಣ ಎನ್., ದ್ವಾರಕಾ ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ಗಣರಾಜ ಕುಂಬ್ಳೆ, ರಾಮಕುಂಜ ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯಾಚರಣೆ ವಿಭಾಗದ ಮುಖ್ಯಸ್ಥರಾಗಿರುವ ಶ್ರೀ ದುರ್ಗಾಗಣೇಶ ಕೆ. ವಿ. ಪ್ರಾರ್ಥಿಸಿದರು. ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಶ್ರೀ ಅಮೃತಕೃಷ್ಣ ಎನ್. ಅವರು ನೆರೆದಿರುವ ಸರ್ವರನ್ನೂ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ಗಣರಾಜ ಕುಂಬ್ಳೆ, ರಾಮಕುಂಜ ವಂದನಾರ್ಪಣೆಗೈದರು. ಬಳಿಕ ಜೀವಿನ್ ಸೀನಿಯರ್ ಕೇರ್, ಬೆಂಗಳೂರು ಇದರ ಡಾ. ಮುರಳೀಧರ ಇವರು ಉಜ್ಜೀವನ ಹಿರಿಯ ನಾಗರಿಕರ ಬಡಾವಣೆಯ ಗ್ರಾಹಕರಿಗಾಗಿ ಮಾಹಿತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು. ನೂರಾರು ಮಂದಿ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನವನ್ನು ಪಡೆದರು.

 
 

Continue Reading
Click to comment

Leave a Reply

Your email address will not be published. Required fields are marked *

Advertisement