ಬ್ರೇಕಿಂಗ್ ನ್ಯೂಸ್… ಕೆ.ಆರ್.ಐ.ಡಿ.ಎಲ್ ಇಂಜಿನಿಯರ್ ವಿಭಾಗದ ಭ್ರಷ್ಟಾಚಾರ ಆರೋಪ… ನಿಷ್ಪಕ್ಷಪಾತ ತನಿಖೆಗೆ ಆದೇಶ… ಪುತ್ತೂರಿನ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಮನವಿ ಸರಕಾರದ ತಕ್ಷಣ ಸ್ಪಂದನೆ
ಮಂಗಳೂರು ಕೆ.ಆರ್.ಐ.ಡಿ.ಎಲ್ ವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್‌ಗಳು ಭ್ರಷ್ಟಾಚಾರ ನಡೆಸಿ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆಂಬ ದೂರು ಬಂದಿದ್ದು ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಬೇಕಂದು ಪುತ್ತೂರಿನ ಮಾನ್ಯ ಶಾಸಕರಾದ ಶ್ರೀ ಕೆ. ಎ. ಅಶೋಕ್ ಕುಮಾರ್ ರೈ ಅವರು ಮಾನ್ಯ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದು, ಮಾಧ್ಯಮಗಳಲ್ಲಿ “ಸಚಿವರ ಹೆಸರಲ್ಲೇ ಶೇ.7 ರಷ್ಟು ಕಮಿಷನ್ ವಸೂಲಿ’ ಎಂದು ಮುಖಪುಟ ವರದಿ ಪ್ರಕಟವಾಗಿರುತ್ತದೆ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಉಸ್ತುವಾರಿ ಮತ್ತು ಇಲಾಖೆಯ ಸಚಿವರ ಹೆಸರಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯಾವುದೇ ಸಿಬ್ಬಂದಿ ಅಥವಾ ಅಧಿಕಾರಿಗಳು, ಎಂಜಿನಿಯರುಗಳು ಹಣ ವಸೂಲಿ ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬುದನ್ನು ಈ ಮೂಲಕ ಸ್ಪಷ್ಟಪಡಿಸಲು ಮತ್ತು ಸದರಿ ಪ್ರಕರಣದಲ್ಲಿ ಮಂಗಳೂರು ವಿಭಾಗದ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಕಾರ್ಯ ನಿರ್ವಾಹಕ ಮತ್ತು ಕಿರಿಯ ಇಂಜಿನಿಯರ್‌ಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆಯೇ, ಮಾನ್ಯ ಶಾಸಕರು ಮಾಡಿರುವ ಆರೋಪದಲ್ಲಿ ಸತ್ಯಾಂಶವಿದೆಯೇ ಎಂಬ ಬಗ್ಗೆ ಸೂಪರಿಂಟೆಂಡೆಂಟ್ ಎಂಜಿನಿಯರ್ ದರ್ಜೆಯ ಅಧಿಕಾರಿ ನೇತೃತ್ವದ ತ್ರಿಸದಸ್ಯ ತಂಡದಿಂದ ತನಿಖೆ ಮಾಡಿಸಿ, ಒಂದೊಮ್ಮೆ ಇಂಜಿನಿಯರುಗಳು ಭ್ರಷ್ಟಾಚಾರ ಮಾಡಿದ್ದಲ್ಲಿ ಅವರ ವಿರುದ್ಧ ಕೈಗೊಳ್ಳಬೇಕಾದ ಶಿಸ್ತು ಕ್ರಮದ ಶಿಫಾರಸಿ ನೊಂದಿಗೆ ವರದಿಯನ್ನು ಕಡತದಲ್ಲಿ 7 ದಿನಗಳ ಒಳಗಾಗಿ ಸಲ್ಲಿಸಲು ಸೂಚಿಸಲಾಗಿದೆ. (ಈಶ್ವರ ಬಿ ಖಂಡ್ರೆ) ಕಾರ್ಯದರ್ಶಿಯವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ಪ್ರತಿ: ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್., ಬೆಂಗಳೂರು. ವಿಳಾಸ: ಕೊಠಡಿ ಸಂಖ್ಯೆ: 36 ಮತ್ತು 37. ನೆಲಮಹಡಿ, ವಿಕಾಸಸೌಧ, ಡಾ॥ ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು