ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನರಿಮೊಗರಿನಲ್ಲಿರುವ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳ ಗೋಪಾಲಕೃಷ್ಣ ಸಭಾಭವನದಲ್ಲಿ ಸೆ.5ರಂದು ಶ್ರೀ ಕೃಷ್ಣ ಲೀಲೋತ್ಸವ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಗಳ ಅಧ್ಯಕ್ಷ ಶಿಬರ ಜಯರಾಮ ಕೆದಿಲಾಯ ಬೆಳಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ನೂತನ ಕೊಠಡಿ ಉದ್ಘಾಟಿಸಲಿದ್ದು, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷಸುಬ್ರಹ್ಮಣ್ಯ ನಟ್ಟೋಜ ಅವರು ನೂತನ ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಲಿದ್ದಾರೆ.ಐಸಿಎಐ ಮಂಗಳೂರು ಶಾಖೆಯ ಮಾಜಿ ಅಧ್ಯಕ್ಷಸಿ.ಎ.ಕೇಶವ ಎನ್. ಬಳ್ಳಕುರಾಯ ಅವರು ವಿದ್ಯಾರ್ಥಿಗಳ ಮಾಹಿತಿ ಆ್ಯಪ್ ಬಿಡುಗಡೆಗೊಳಿಸಲಿದ್ದಾರೆ. ಶ್ರೀಕೃಷ್ಣ ಲೀಲೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹಾಗೂ ಶಿಕ್ಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.