Published
1 day agoon
By
Akkare News

ಮೆರವಣಿಗೆಯ ವೇಳೆ ಕೆಲವರು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಅವಹೇಳನಕಾರಿ ಹಾಗೂ ದ್ವೇಷಪೂರಿತ ಘೋಷಣೆಗಳನ್ನು ಕೂಗಿದ್ದಾರೆ. ಇದರಿಂದ ಕೋಮು ವೈಮನಸ್ಯಕ್ಕೆ ಕಾರಣವಾಗುವ ವಾತಾವರಣ ನಿರ್ಮಿಸುವ ಪ್ರಯತ್ನ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಕಾರ್ಯಕ್ರಮದ ಬಳಿಕ ನಡೆದ ಸಭೆಯಲ್ಲಿ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರು ಪೊಲೀಸ್ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಪುತ್ತೂರು ಚಲೋ ಕಾರ್ಯಕ್ರಮದಲ್ಲಿ ದ್ವೇಷಪೂರಿತ ಘೋಷಣೆ ಕೂಗಿದವರ ವಿರುದ್ಧ, ಪ್ರಚೋದನಕಾರಿ ಭಾಷಣ ಮಾಡಿದ ಶ್ರೀಕಾಂತ್ ಶೆಟ್ಟಿ ಹಾಗೂ ಕಾರ್ಯಕ್ರಮ ಸಂಘಟಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.ಈ ಸಂದರ್ಭದಲ್ಲಿ ಅಮಳ ರಾಮಚಂದ್ರ, ಎಚ್. ಮಹಮ್ಮದ್ ಆಲಿ, ಮೌರಿಸ್ ಮಸ್ಕ್ಯಾರೇನಸ್, ಉಲ್ಲಾಸ್ ಕೋಟ್ಯಾನ್, ಅಮರನಾಥ್ ಗೌಡ ಹಾಗೂ ರಿಯಾಜ್ ಪರ್ಲಡ್ಕ ಉಪಸ್ಥಿತರಿದ್ದರು.


