Published
20 hours agoon
By
Akkare News

ಆರ್ಯಾಪು ಗ್ರಾಮ ಕುಂಜೂರುಪಂಜ ನಿವಾಸಿ ರಮೇಶ್ ರೈ ಅವರ ಪುತ್ರ ಹಾಗೂ ನೆಹರು ನಗರದ ಖಾಸಗಿ ಕಾಲೇಜೊಂದರ ಅಂತಿಮ ವರ್ಷದ ಬಿ.ಕಾಂ. ವಿದ್ಯಾರ್ಥಿ ಶ್ರಮಿಕ್ ರೈ (20) ಮೃತಪಟ್ಟ ವ್ಯಕ್ತಿ.
ಬೊಳುವಾರಿನ ಜಿಮ್ಸೆಂಟರ್ವೊಂದರಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಶ್ರಮಿಕ್ ಅವರಿಗೆ ಏಕಾಏಕಿ ಉಸಿರುಕಟ್ಟಿದ್ದು, ಕೂಡಲೇ ಆತನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಆಸ್ಪತ್ರೆ ತಲುಪುವಷ್ಟರಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಆಸ್ಪತ್ರೆಯ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.
ಈ ಘಟನೆ ಕುರಿತು ವಿಷಯ ತಿಳಿದು ಶಾಸಕ ಅಶೋಕ್ ಕುಮಾರ್ ರೈ ಅವರು ಮೃತ ವಿದ್ಯಾರ್ಥಿಯ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದಿದ್ದು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.


