Connect with us

ಇತ್ತೀಚಿನ ಸುದ್ದಿಗಳು

ಅಂಬೇಡ್ಕರ್ ಅವಹೇಳನ ಆರೋಪ: ವೇದಮೂರ್ತಿ ವಿರುದ್ಧ ಪುತ್ತೂರು ಕಾಂಗ್ರೆಸ್ ಎಸ್ಸಿ ಘಟಕದಿಂದ ದೂರು

Published

on

ಪುತ್ತೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಾಚ್ಯವಾಗಿ ನಿಂದಿಸಿ, ಬುದ್ಧ ಹಾಗೂ ಬಸವಣ್ಣ ಅವರ ಬಗ್ಗೆಯೂ ನಿಂದನಾತ್ಮಕ ಹೇಳಿಕೆಗಳನ್ನು ನೀಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ವೇದಮೂರ್ತಿ ಎಂಬ ವ್ಯಕ್ತಿಯ ವಿರುದ್ಧ ಪುತ್ತೂರು ಕಾಂಗ್ರೆಸ್ ಎಸ್ಸಿ ಘಟಕದ ವತಿಯಿಂದ ದೂರು ನೀಡಲಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ವೇದಮೂರ್ತಿ ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅವಾಚ್ಯವಾಗಿ ನಿಂದಿಸಿರುವ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ನಿಂದನಾತ್ಮಕ ಹೇಳಿಕೆಯಿಂದ ಅಂಬೇಡ್ಕರ್ ಅವರ ಅನುಯಾಯಿಗಳಾದ ತಮಗೆ ಮಾನಸಿಕ ಆಘಾತವಾಗಿದೆ. ಅಲ್ಲದೆ, ಇಂತಹ ಹೇಳಿಕೆಗಳಿಂದ ಸಮಾಜದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅಂಬೇಡ್ಕರ್ ಅವರನ್ನು ನಿಂದಿಸಿದ ವ್ಯಕ್ತಿಯನ್ನು ತಕ್ಷಣ ಬಂಧಿಸಿ, ದೇಶದ್ರೋಹ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಪುತ್ತೂರು ಬ್ಲಾಕ್ ಎಸ್ಸಿ ಘಟಕದ ಅಧ್ಯಕ್ಷ ಬಾಬು ಮರಿಕೆ, ವಿಟ್ಲ ಬ್ಲಾಕ್ ಎಸ್ಸಿ ಘಟಕದ ಅಧ್ಯಕ್ಷ ರಾಮಣ್ಣ ಪಿಲಿಂಜ, ಜಿ.ಪಂ. ಮಾಜಿ ಅಧ್ಯಕ್ಷ ಸೋಮನಾಥ್, ಜಿಲ್ಲಾ ಆರೋಗ್ಯ ರಕ್ಷಕ ಸಮಿತಿ ಸದಸ್ಯ ದಾಮೋದರ್ ಮುರ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಅಭಿಷೇಕ್ ಬೆಳ್ಳಿಪ್ಪಾಡಿ, ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷ ಪ್ರಹ್ಲಾದ್ ಬೆಳ್ಳಿಪ್ಪಾಡಿ, ದಲಿತ ಮುಖಂಡ ಉಪೇಂದ್ರ ಸಂಟ್ಯಾರು ಹಾಗೂ ಬೂತ್ ಅಧ್ಯಕ್ಷ ಗಣೇಶ್ ಕಾರೆಕ್ಕಾಡು ಉಪಸ್ಥಿತರಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version