Connect with us

ಸ್ಥಳೀಯ

ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಅಧಿಕೃತ ಮಾನ್ಯತೆ ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕರ ಭೇಟಿ

Published

on

ಪುತ್ತೂರು: ಅಖಿಲ ಭಾರತ ತುಳು ಒಕ್ಕೂಟ ನಿಯೋಗ ಪುತ್ತೂರು ಶಾಸಕರಾದ ಅಶೋಕ ಕುಮಾರ್ ರೈ ಅವರನ್ನು ಭೇಟಿ ಮಾಡಿ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಲು ಮುಖ್ಯಮಂತ್ರಿಗಳಿಗೆ ತಿಳಿಸುವಂತೆ ಮನವಿ ಮಾಡಿತು.

ನಿಯೋಗದಲ್ಲಿ ಅಖಿಲ ಭಾರತ ತುಳು ಒಕ್ಕೂಟ ಅಧ್ಯಕ್ಷ ಎ.ಸಿ. ಭಂಡಾರಿ, ಪ್ರಧಾನ ಕಾರ್ಯದರ್ಶಿ ಪಿ. ಎ. ಪೂಜಾರಿ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ತುಳು ಒಕ್ಕೂಟದ ಸದಸ್ಯರಾದ ತಾರಾನಾಥ್ ಶೆಟ್ಟಿ ಬೋಳಾರ, ಹರಿಣಾಕ್ಷಿ ಜೆ. ಶೆಟ್ಟಿ, ವಿಜಯ ಕುಮಾರ್ ಭಂಡಾರಿ ಹೆಬ್ಬಾರಬೈಲ್, ಜಿ.ವಿ.ಎಸ್. ಉಳ್ಳಾಲ್, ದ.ಕ. ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷರು ಪ್ರದೀಪ್ ಕುಮಾರ್ ಕಲ್ಕೂರ ಉಪಸ್ಥಿತರಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version