Published
57 minutes agoon
By
Akkare News

ಈ ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ವನ್ಯಜೀವಿಗಳ ಸುರಕ್ಷತೆ ಮತ್ತು ಹೆದ್ದಾರಿಗಳ ನಿರ್ಮಾಣದ ಬಗ್ಗೆ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.
ಕಾರು ಚಾಲಕ ಇದರ ಬಗ್ಗೆ ಒಂದು ಚೂರು ತಲೆಕೆಡಿಸಿಕೊಳ್ಳದೇ, ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ನರಳುತ್ತಿದ್ದ ಈ ಮೂಕಪ್ರಾಣಿಯನ್ನ ಕಂಡ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆದ್ದಾರಿಗಳಲ್ಲಿ ಪ್ರಾಣಿಗಳು ಸಿಲುಕಿ ನರಳುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪರಿಸರ ಪ್ರಿಯರ ತೀವ್ರ ಕಳವಳಕ್ಕೆ ಕಾರಣವಾಗಿದೆ.
ಅರಣ್ಯ ಇಲಾಖೆ ಕಾರ್ಯಾಚರಣೆ ಸ್ಥಳೀಯರ ಮಾಹಿತಿ ಮೇರೆಗೆ ತಕ್ಷಣವೇ ಘಟನಾಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ, ಚಿರತೆಯನ್ನ ರಕ್ಷಿಸಿ ಚಿಕಿತ್ಸೆ ಕೊಡಿಸುವ ಉದ್ದೇಶದಿಂದ ಚಿರತೆ ಬಳಿಗೆ ಧಾವಿಸಿದರು. ರಕ್ಷಣಾ ಕಾರ್ಯಾಚರಣೆಗೂ ಮುನ್ನ ಚಿರತೆಯನ್ನ ನಿಯಂತ್ರಿಸಲು ಅಧಿಕಾರಿಗಳು ಅರಿವಳಿಕೆ ಮದ್ದು ಸಿಡಿಸಿದರು. ಆದರೆ, ಮದ್ದಿನ ಪ್ರಭಾವ ಸಂಪೂರ್ಣವಾಗಿ ಆವರಿಸುವ ಮುನ್ನವೇ, ಗಾಯಗೊಂಡು ಕೆರಳಿದ ಸ್ಥಿತಿಯಲ್ಲಿದ್ದ ಚಿರತೆ ತನ್ನತ್ತ ಬರುತ್ತಿದ್ದ ಅಧಿಕಾರಿಯೊಬ್ಬರ ಮೇಲೆ ಏಕಾಏಕಿ ಎರಗಿದೆ. 

