Published
55 minutes agoon
By
Akkare News

ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಸಂಬಂಧಿಕರ ಮನೆ ಮೇಲೆ ಇಡಿ ದಾಳಿ ಬಗ್ಗೆ ಕೇಳಿದಾಗ, “ಈ ಹಿಂದೆಯೂ ದಾಳಿ ಮಾಡಿದ್ದರು. ಸತೀಶ್ ಜಾರಕಿಹೊಳಿ ಹಿರಿಯ ಸಚಿವರಾಗಿದ್ದು, ರಾಜಕಾರಣದ ಜತೆಗೆ ವ್ಯವಹಾರ ಮತ್ತು ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ. ಅವರು ಕಾನೂನಿನ ಚೌಕಟ್ಟಿನಲ್ಲೇ ವ್ಯವಹಾರ ನಡೆಸುತ್ತಿದ್ದಾರೆ. ಇಡಿ ಕೇಳುವ ಪ್ರಶ್ನೆಗಳಿಗೆ ಸತೀಶ್ ಜಾರಕಿಹೊಳಿ ಸೂಕ್ತ ಉತ್ತರ ನೀಡಲಿದ್ದಾರೆ. ಹೀಗಾಗಿ ಯಾರೂ ಗಾಬರಿಯಾಗಬೇಕಿಲ್ಲ. ಸಂಬಂಧಿಕರ ವ್ಯವಹಾರಗಳ ಬಗ್ಗೆ ನಮಗೆ ಗೊತ್ತಿಲ್ಲ. ಆದರೆ ಸತೀಶ್ ಜಾರಕಿಹೊಳಿ ಪ್ರಾಮಾಣಿಕ ರಾಜಕಾರಣಿ, ಅವರು ಯಾವುದೇ ತಪ್ಪು ಮಾಡಿಲ್ಲ ಎಂಬ ವಿಶ್ವಾಸ ನಮಗಿದೆ” ಎಂದರು. .
ಬಿಜೆಪಿಯವರು ದಲಿತ ನಾಯಕರ ಬೆಳವಣಿಗೆ ಸಹಿಸಲಾಗುತ್ತಿಲ್ಲ “ಸತೀಶ್ ಜಾರಕಿಹೊಳಿ ಅವರು ಪ್ರಬಲವಾಗಿ ಬೆಳೆಯುತ್ತಿರುವ ನಾಯಕನಾಗಿರುವುದನ್ನು ಕೆಲವರಿಗೆ ಸಹಿಸಲಾಗುತ್ತಿಲ್ಲ. ಅವರನ್ನು ರಾಜಕೀಯವಾಗಿ ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ. ಸತೀಶ್ ಜಾರಕಿಹೊಳಿ ಅವರ ಬೆಳವಣಿಗೆಯನ್ನು ಸಹಿಸಿಕೊಳ್ಳಲು ಆಗದೆ ತೊಂದರೆ ಕೊಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಇದು ಅವರಿಗೆ ತಿರುಗುಬಾಣವಾಗಲಿದೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ. ನನ್ನ ಮೇಲೂ ದಾಳಿ ಮಾಡಿ ಬಂಧಿಸಿದ್ದರು. ಆದರೆ ಇಂದು ಏನಾಗಿದೆ? ನಾನು ರಾಜ್ಯದ ಸಿಎಂ ಆಗಿರುವೆ” ಎಂದರು.
“ಮೊದಲು ನಾಗೇಂದ್ರ ಅವರ ಮೇಲೆ ದಾಳಿ ಮಾಡಿದರು. ನಾನು ಈ ಪ್ರಕರಣ ಪರಿಶೀಲನೆ ಮಾಡಿದೆ. ಯಾವುದೇ ತಪ್ಪು ಮಾಡಿರಲಿಲ್ಲ. ಬಿಜೆಪಿಯವರ ತಲೆಯಲ್ಲಿ ಏನೂ ಇಲ್ಲ. ತನಿಖೆ ಮಾಡಿಸಿದ್ದೇವೆ. ಬ್ಯಾಂಕ್ ಅಧಿಕಾರಿಗಳು ತಪ್ಪು ಮಾಡಿದ್ದಾರೆ ಎಂದು ಹೇಳಿದ್ದು ನಾವೆ. ಆ ಹಣವನ್ನು ವಾಪಸ್ ಪಡೆಯಲಾಗಿದೆ. ಇಡಿ, ಸಿಬಿಐ ಕೈಲಿ ಒಂದು ರೂ ವಾಪಸ್ ಪಡೆಯಲು ಆಗಿಲ್ಲ. ₹84 ಕೋಟಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಿದ್ದರು. ಬಳಿಕ ಸಿಐಡಿ ಹಾಗೂ ಸಿಸಿಬಿ ಅಧಿಕಾರಿಗಳು ತನಿಖೆ ನಡೆಸಿ ₹79 ಕೋಟಿ ಹಣವನ್ನು ವಾಪಸ್ ಪಡೆದಿದ್ದಾರೆ. ಇನ್ನೂ ₹5 ಕೋಟಿ ಮಾತ್ರ ಬಾಕಿ ಉಳಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ ಬಳಿಕವೂ ಈ ವಿಚಾರವನ್ನು ರಾಜಕೀಯಗೊಳಿಸಲಾಗುತ್ತಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
“ತನಿಖೆ ನಡೆಸಿ ಕ್ರಮ ಕೈಗೊಂಡಿರುವ ಸರ್ಕಾರದ ವಿರುದ್ಧವೇ ಬಿಜೆಪಿ ರಾಜಕೀಯ ಆರೋಪ ಮಾಡುತ್ತಿರುವುದು ಸರಿಯಲ್ಲ. ಈಗ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಹಿಂದೆ ಬಿದ್ದಿದ್ದಾರೆ. ಕೆಪಿಎಸ್ ಸಿ ವಿಚಾರದಲ್ಲಿ ಅವರನ್ನು ನೇಮಕ ಮಾಡಿದ್ದು ಯಾರು? ಈಗ ನಾನು ಈ ಬಗ್ಗೆ ಮಾತನಾಡುವುದಿಲ್ಲ. ತನಿಖೆ ನಡೆಯಲಿ.” ಎಂದರು.


ಕಾಂಗ್ರೆಸ್ ಸರ್ಕಾರ ಸಚಿವ ಸತೀಶ್ ಜಾರಕಿಹೊಳಿಯವರ ಬೆಂಬಲಕ್ಕೆ ನಿಲ್ಲುತ್ತದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ನಾವು ನೂರಕ್ಕೆ ನೂರು ಬೆಂಬಲ ನೀಡುತ್ತೇವೆ. ಸಚಿವರ ಕುಟುಂಬದವರ ಮೇಲೆಯೂ ಇಡಿ ದಾಳಿ ನಡೆಸಿರುವುದು ದುರದೃಷ್ಟಕರ.ಇಡಿ ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ಅವರು ಸಮರ್ಥವಾಗಿ ಉತ್ತರ ನೀಡುತ್ತಾರೆ. ಅವರು ಒಬ್ಬ ಪ್ರಗತಿಪರ,ದೂರದೃಷ್ಠಿಯುಳ್ಳ ಪ್ರಾಮಾಣಿಕ ರಾಜಕಾರಣಿ, ಅವರು ಯಾವುದೇ ತಪ್ಪು ಎಸಗಿಲ್ಲ ಎಂಬ ವಿಶ್ವಾಸ ನನಗಿದೆ ಎಂದರು. ಎಲ್ಲ ವರ್ಗದವರೂ ಸಮಾನರೆಂಬುದು ನಮ್ಮ ಸರ್ಕಾರದ ಚಿಂತನೆ ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡುತ್ತಿದ್ದಾರಾ ಎಂದು ಕೇಳಿದಾಗ, “ಖಂಡಿತವಾಗಿಯೂ ನಮ್ಮ ಸರ್ಕಾರವನ್ನು, ನಮ್ಮ ಪಕ್ಷವನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿಚಾರವಾಗಿ ಮಾತನಾಡಿದ್ದರಲ್ಲಿ ತಪ್ಪಾ? ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿಚಾರದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಯವರು ಮಾತನಾಡದೇ, ಬಿಜೆಪಿಯವರು ಮಾತನಾಡುತ್ತಾರೆಯೇ? ದೇಶದ ನಾಯಕ ಒಂದು ವೇದಿಕೆಯಲ್ಲಿ ಭಾಷಣ ಮಾಡಿದಾಗ, ಆ ಜಾಗವನ್ನು ಶುದ್ಧ ಮಾಡುತ್ತೇವೆ ಎನ್ನುವುದು ಮಾನವೀಯತೆಯೇ? ನಮ್ಮ ಸರ್ಕಾರ ಪೌರ ಕಾರ್ಮಿಕರ ಪುತ್ರನನ್ನು ಮುಜರಾಯಿ ಸಚಿವರನ್ನಾಗಿ ಮಾಡಿದೆ. ದೇವರು ಎಲ್ಲರಿಗೂ ಸೇರಿದವನು, ಅವನು ಯಾರ ಮನೆಯ ಸ್ವತ್ತಲ್ಲ. ಭಗವಂತ ಎಲ್ಲ ಜಾತಿವರ್ಗದವನಿಗೂ ಸೇರಿದವನು. ದೇವರಿಗೆ ಬಡವ ಶ್ರೀಮಂತ ಎಂಬ ಬೇಧವಿಲ್ಲ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮೇಲ್ವರ್ಗದವರು ಎಲ್ಲರೂ ಸಮಾನರು ಎಂಬುದು ನಮ್ಮ ಸರ್ಕಾರದ ಚಿಂತನೆ. ರೈತರು, ಕಾರ್ಮಿಕರಿಗೆ ಜಾತಿಧರ್ಮಗಳ ಹಂಗಿಲ್ಲ. ಪರಿಶಿಷ್ಠ ಜಾತಿಗೆ ಸೇರಿದ ನಾಯಕರನ್ನು ಮುಗಿಸಲು ಬಿಜೆಪಿಯವರು ಮುಂದಾಗಿದ್ದಾರೆ” ಎಂದು ತಿರುಗೇಟು ನೀಡಿದರು.
ವಿದೇಶಗಳಲ್ಲಿ ವ್ಯವಹಾರ ತಪ್ಪೇ? ಇಡಿ ತನಿಖಾ ಸಂಸ್ಥೆಯವರು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಕಾಯ್ದೆ ಉಲ್ಲಂಘನೆಯಡಿ ದಾಳಿ ನಡೆಸಿದೆ ಎಂಬ ಇಡಿ ಹೇಳಿಕೆ ಬಗ್ಗೆ ಕೇಳಿದಾಗ, “ಭಾರತದಲ್ಲಿದ್ದುಕೊಂಡು ವಿದೇಶದಲ್ಲಿ ಹೂಡಿಕೆ, ವ್ಯಾಪಾರ ಮಾಡಲು ಕಾನೂನಿನಡಿ ಅವಕಾಶವಿದೆ. ಅವರ ಕುಟುಂಬ ಸದಸ್ಯರು ವಿದೇಶದಲ್ಲಿ ವ್ಯವಹಾರ ಮಾಡುವುದು ತಪ್ಪಲ್ಲ. ನನ್ನ ಕುಟುಂಬದವರೂ ವಿದೇಶದಲ್ಲಿ ವ್ಯವಹಾರ ಇರಿಸಿಕೊಳ್ಳುವುದನ್ನು ನಾನು ನಿರ್ಬಂಧಿಸಲು ಸಾಧ್ಯವೇ? ಈ ಇಡಿ ದಾಳಿಯನ್ನು ರಾಜಕೀಯ ಉದ್ದೇಶದಿಂದ ಮಾಡಲಾಗಿದೆ. ಈ ಧೋರಣೆಯಿಂದಾಗಿಯೇ 12 ಲಕ್ಷಕ್ಕೂ ಹೆಚ್ಚು ಉದ್ದಿಮೆದಾರರು ಭಾರತವನ್ನು ತೊರೆದಿದ್ದು, ಇಂತಹ ಬೆಳವಣಿಗೆ ದೇಶದ ಆರ್ಥಿಕ ಪರಿಸ್ಥಿತಿಗೂ ತೊಂದರೆಯುಂಟು ಮಾಡುತ್ತದೆ” ಎಂದರು. ನೂರು ಪ್ರತಿಭಟನೆ ಮಾಡಲಿ, ಹೆದರಲ್ಲ “ನೂರು ಪ್ರತಿಭಟನೆ ಮಾಡಲಿ, ನೂರು ಓಡಾಟ ಮಾಡಲಿ, ನೂರು ಪತ್ರಿಕಾಗೋಷ್ಠಿ ನಡೆಸಲಿ. ಯಾರಿಗೆ ಏನು ಮಾಡಬೇಕೋ ಮಾಡಲಿ. ನಾವು ಯಾವುದಕ್ಕೂ ಹೆದರುವುದಿಲ್ಲ” ಎಂದು ಹೇಳಿದರು. ವಿಪಕ್ಷಗಳ ಟೀಕೆಗಳು ಹಾಗೂ ತನಿಖಾ ಕ್ರಮಗಳು ಕಾಂಗ್ರೆಸ್ ನಾಯಕರನ್ನು ಮತ್ತಷ್ಟು ಎಚ್ಚರಿಕೆಯಿಂದ ಇರುವಂತೆ ಮಾಡುತ್ತವೆ. “ನಮಗೆ ಹೆಚ್ಚು ವಿರೋಧಿಗಳು ಇದ್ದಷ್ಟೂ ನಾವು ಹೆಚ್ಚು ಎಚ್ಚರಿಕೆಯಿಂದ ಇರಬೇಕಾಗುತ್ತದೆ” ಎಂದರು. ಕೆಪಿಎಸ್ ಸಿ ಪ್ರಕರಣ: ತಪ್ಪೆಸಗಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಗೃಹ ಸಚಿವ ಪ್ರಿಯಾಂಕ್ ಖರ್ಗೆಯವರು ಕೆಪಿಎಸ್ ಸಿ ಹಗರಣದ ತನಿಖೆಯನ್ನು ಮುತುರ್ವಜಿ ವಹಿಸಿ ಹಲವು ದಾಖಲೆಗಳನ್ನು ಕ್ರೋಢೀಕರಿಸಿದ್ದಾರೆ. ಆದರೆ ಜನತಾದಳದ ನಾಯಕರಿಗೆ ಕೆಪಿಎಸ್ ಸಿ ಪರೀಕ್ಷೆಯ ಒಎಂಆರ್ ಶೀಟ್ ಸಿಗಲು ಹೇಗೆ ಸಾಧ್ಯವಾಯಿತು ಜನತಾದಳದ ನಾಯಕನಿಗೂ ಈ ಪ್ರಕರಣಕ್ಕೂ ಸಂಬಂಧವಿರಬಹುದು. ಅವರು ನಮ್ಮನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ಅವರ ಬಳಿ ಇರುವ ದಾಖಲೆಗಳನ್ನು ನೀಡಲಿ. ಅದಕ್ಕೆ ತಕ್ಕ ಉತ್ತರವನ್ನು ನೀಡಲು ನಾವು ಸಿದ್ಧರಿದ್ದೇವೆ. ಈ ಪ್ರಕರಣದಲ್ಲಿ ತಪ್ಪೆಸಗಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಕಾನೂನಿನ ಚೌಕಟ್ಟಿನ್ನು ಮೀರಿ ನಾವು ಯಾರಿಗೂ ಸಹಾಯ ಮಾಡಿಲ್ಲ. ಕರ್ನಾಟಕ ಪ್ರಗತಿಪರ ರಾಜ್ಯವಾಗಿದ್ದು. ನಮಗೆ ದೇಶ ಹಾಗೂ ರಾಜ್ಯದ ಹಿತಾಸಕ್ತಿ ಪ್ರಮುಖವಾಗಿದೆ” ಎಂದರು. ಟೀಕೆಗಳಿಗೆ ಹೆದರುವುದಿಲ್ಲ ನಾಳೆ ಸರ್ಕಾರ 100 ದಿನವನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ವಿಪಕ್ಷಗಳ ಟೀಕೆಗಳನ್ನು ಎದುರಿಸುವುದು ಸವಾಲೆನಿಸಿದೆಯೇ ಎಂದು ಕೇಳಿದಾಗ, “ಹೆಚ್ಚು ಶತ್ರುಗಳಿದ್ದರೆ ನಾವು ಹೆಚ್ಚು ಎಚ್ಚರದಿಂದಿರುತ್ತೇವೆ. ಟೀಕೆಗಳು ಬರಲಿ , ನಮ್ಮ ಶಾಸಕರು, ಸಚಿವರು ಎಚ್ಚರಿಕೆಯಿಂದರಬೇಕು. ಟೀಕೆಗಳಿಗೆ ನಾವು ಹೆದರುವುದಿಲ್ಲ” ಎಂದರು.