Connect with us

ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಆರ್ ಪೂಜಾರಿ ನೇಮಕ ಕರ್ನಾಟಕ ಕಾಂಗ್ರೆಸ್‌ಗೆ ಹೊಸ ಜಿಲ್ಲಾಧ್ಯಕ್ಷರು: ಯಾವ ಜಿಲ್ಲೆಗೆ ಯಾರು? ಸಂಪೂರ್ಣ ಪಟ್ಟಿ ಇಲ್ಲಿದೆ

Published

on

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ಸಂಘಟನಾ ಪುನರ್‌ವ್ಯವಸ್ಥೆಗೆ ವೇಗ ನೀಡುವ ಮಹತ್ವದ ಬೆಳವಣಿಗೆ ನಡೆದಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾ ಕಾಂಗ್ರೆಸ್ ಸಮಿತಿ (DCC) ಅಧ್ಯಕ್ಷರ ನೇಮಕಾತಿಗೆ ಕಾಂಗ್ರೆಸ್‌ ಅಧ್ಯಕ್ಷರು ಅನುಮೋದನೆ ನೀಡಿದ್ದಾರೆ. ಈ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸೆಪ್ಟೆಂಬರ್ 9, 2026ರಂದು ಹೊರಡಿಸಿರುವ ಪ್ರಕಟಣೆಯಲ್ಲಿ ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದ ಪ್ರಸ್ತಾವನೆಗೆ ಪಕ್ಷದ ಅಧ್ಯಕ್ಷರು ಒಪ್ಪಿಗೆ ನೀಡಿರುವುದಾಗಿ ತಿಳಿಸಲಾಗಿದೆ. ಇದರೊಂದಿಗೆ ಹಲವು ಜಿಲ್ಲೆಗಳಲ್ಲಿ ಕಾಂಗ್ರೆಸ್ ಸಂಘಟನೆಯ ನೇತೃತ್ವ ಹೊಸ ಮುಖಗಳ ಕೈಗೆ ಬರಲಿದೆ.ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ಎಐಸಿಸಿ ನೇಮಕ ಮಾಡಲಾಗಿದೆೆ. ಕಾಂಗ್ರೆಸ್ ಪಕ್ಷ ಕೈಗೊಂಡಿರುವ ‘ಸಂಘಟನ್ ಸೃಜನ ಅಭಿಯಾನ’ ದ ಭಾಗವಾಗಿ ಈ ನೇಮಕಾತಿ ಪ್ರಕ್ರಿಯೆ ನಡೆದಿದೆ. ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರತಿ ಜಿಲ್ಲೆಗೆ AICC ವೀಕ್ಷಕರನ್ನು ನಿಯೋಜಿಸಲಾಗಿತ್ತು.
ಈ ವೀಕ್ಷಕರು ಆಯಾ ಜಿಲ್ಲೆಗಳಿಗೆ ಭೇಟಿ ನೀಡಿ ಪಕ್ಷದ ಮುಖಂಡರು, ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಇತರ ಪ್ರಮುಖರೊಂದಿಗೆ ಸಮಗ್ರವಾಗಿ ಚರ್ಚೆ ನಡೆಸಿದ್ದರು. ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯ ಸ್ಥಿತಿ, ಕಾರ್ಯಚಟುವಟಿಕೆಗಳು, ಸ್ಥಳೀಯ ನಾಯಕತ್ವ ಹಾಗೂ ಕಾರ್ಯಕರ್ತರ ಅಭಿಪ್ರಾಯಗಳ ಕುರಿತು ಮಾಹಿತಿ ಸಂಗ್ರಹಿಸಿದ್ದರು.‌ ಜಿಲ್ಲಾವಾರು ಕಾಂಗ್ರೆಸ್ ಸಂಘಟನೆಯ ಕಾರ್ಯವೈಖರಿ ಮತ್ತು ಮುಖಂಡರು-ಕಾರ್ಯಕರ್ತರ ಅಭಿಪ್ರಾಯಗಳನ್ನು ಪರಿಶೀಲಿಸಿದ ಬಳಿಕ AICC ವೀಕ್ಷಕರು ತಮ್ಮ ಸಮಗ್ರ ವರದಿಗಳನ್ನು ಸಲ್ಲಿಸಿದ್ದರು. ಈ ವರದಿಗಳ ಆಧಾರದ ಮೇಲೆ ಜಿಲ್ಲಾಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಮುಂದುವರಿದಿದೆ. ವರದಿಗಳನ್ನು ಸ್ವೀಕರಿಸಿದ ನಂತರ ಪ್ರತಿ ವೀಕ್ಷಕರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಲಾಗಿದ್ದು, ಪಕ್ಷದ ಹಿರಿಯ ಕಾಂಗ್ರೆಸ್ ನಾಯಕರೊಂದಿಗೂ ಸಮಾಲೋಚನೆ ನಡೆಸಲಾಗಿದೆ ಎಂದು AICC ಪ್ರಕಟಣೆ ತಿಳಿಸಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version