Published
1 hour agoon
By
Akkare News
ಪುತ್ತೂರು; 2800 ಚ.ಅ.ವಿಸ್ತೀರ್ಣದ ತನಕ ನಿರ್ಮಾಣ ಮಾಡಲಾದ ಮನೆಗಳಿಗೆ ಯಾವುದೇ ದಾಖಲೆ ಇಲ್ಲದೇ ಇದ್ದರೂ ಇಲಾಖೆಯಿಂದ ಯಾವುದೇ ಎನ್ಒಸಿ ಪಡೆಯದೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಇಂಧನ ಸಚಿವ ಕೆ ಜೆ ಜಾರ್ಜ್ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ಈ ಮನವಿ ಸಲ್ಲಿಸಿದರು. ಈಗಾಗಲೇ ಮನೆ ಕಟ್ಟಿಕೊಂಡು, ಮನೆ ನಿರ್ಮಾಣವಾದ ಜಾಗಕ್ಕೆ ಯಾವುದೇ ದಾಖಲೆಗಳಿಲ್ಲದ ಕಾರಣ ಅಂಥವ ಕುಟುಂಬಗಳು ವಿದ್ಯುತ್ ಸಂಪರ್ಕದಿಂದ ವಂಚಿತರಾಗಿವೆ. ಈ ರೀತಿ ನಿರ್ಮಿಸಲಾದ ಮನೆಗಳಿಗೆ ಇಲಾಖೆಯಿಂದ ವಿದ್ಯುತ್ ಸಂಪರ್ಕಕ್ಕೆ ಕೆಲವೊಂದು ದಾಖಲೆಗಳನ್ನು ಕೇಳುತ್ತಿದ್ದಾರೆ.




