Published
52 minutes agoon
By
Akkare News
ಪುತ್ತೂರು: ಇದುವರೆಗೆ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಕಾಡುಕೋಣಗಳು ಇದೀಗ ಪುತ್ತೂರು ಪೇಟೆಯತ್ತಲೂ ಲಗ್ಗೆ ಇಡತೊಡಗಿವೆ. ಪುತ್ತೂರು ಬೈಪಾಸ್ ರಸ್ತೆಯ ದುಗ್ಗಮ್ಮ–ದೇರಣ್ಣ ಹಾಲ್ ಸಮೀಪ ಸೆ.11ರ ನಸುಕಿನ ಜಾವ ರಸ್ತೆಯಲ್ಲೇ ಎರಡು ಕಾಡುಕೋಣಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.