ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ಉಪ್ಪಿನಂಗಡಿ ಹೋಬಳಿ ಮಟ್ಟದ ‘ಪ್ರಜಾ ಸೇವೆ ಆಂದೋಲನ’ ಸಭೆಯು ಸೆ.12ರಂದು ಉಪ್ಪಿನಂಗಡಿ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.
ಶನಿವಾರ ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ನೇರವಾಗಿ ಸಲ್ಲಿಸಬಹುದಾಗಿದೆ.
ಅಲ್ಲದೆ, ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ಪಡೆಯಲು ಅರ್ಜಿ ಸಲ್ಲಿಸುವ ಅವಕಾಶವೂ ಇರಲಿದ್ದು, ಅರ್ಹ ಫಲಾನುಭವಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕರ ಕಚೇರಿ ಮನವಿ ಮಾಡಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಕೋರಲಾಗಿದೆ.