Published
2 hours agoon
By
Akkare News
ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಇದರ ಪ್ರೌಢಶಾಲಾ ವಿಭಾಗದಲ್ಲಿ ಮಾದಕ ವ್ಯಸನ ಮತ್ತು ಅತಿಯಾದ ಮೊಬೈಲ್ ಬಳಕೆಯ ದುಷ್ಪರಿಣಾಮಗಳ ಕುರಿತಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ರಂಗಚಾವಡಿ ಕಲಾವಿದರು ಪುತ್ತೂರು ಇವರ ವತಿಯಿಂದ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು. 
ಶಾಲಾ ಉಪ ಪ್ರಾಂಶುಪಾಲರಾದ ನಾಗರಾಜ ಭಟ್ ಇವರು ಕೃಷ್ಣಪ್ಪ ಬಂಬಿಲ ಇವರನ್ನು ಸ್ಮರಣಿಕೆ ನೀಡಿ ಗೌರವಿಸಿದರು. ಚಿತ್ರಕಲಾ ಶಿಕ್ಷಕರಾದ ಜಗನ್ನಾಥ ಅರಿಯಡ್ಕ ಇವರ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಿಕ್ಷಕ ಪ್ರಶಾಂತ್ ಅನಂತಾಡಿ ಸ್ವಾಗತಿಸಿದರು. ಗ್ರೆಗೊರಿ ರೋನಿ ಪಾಯ್ಸ್ ವಂದಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು.




