Published
52 minutes agoon
By
Akkare News
ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ 21ರವರೆಗೆ ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ ಸೆ.13ರಂದು ನಡೆಯಿತು.ನವರಾತ್ರಿ ಉತ್ಸವ-2026 
ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಆಗಿರುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಭಂಡಾರಿ ಕೈಪ, ಪ್ರಧಾನ ಅರ್ಚಕ ರಾಮಕೃಷ್ಣ ಭಟ್, ವ್ಯವಸ್ಥಾಪಕ ಸಂತೋಷ್ ಕುಮಾರ್ ರೈ ಕೆದಿಕಂಡೆಗುತ್ತು, ವ್ಯವಸ್ಥಾಪನಾ ಸಮಿತಿ, ಜೀರ್ಣೋದ್ಧಾರ ಸಮಿತಿ, ಉತ್ಸವ ಸಮಿತಿ ಸದಸ್ಯರು ಮತ್ತಿತರರು ಭಾಗವಹಿಸಿದ್ದರು.



