Connect with us

ಇತರ

ಮಂಗಳೂರಿನಲ್ಲಿ ಸಂಪುಟ ಸಭೆ: ಮೇರಿಹಿಲ್, ಡಿಸಿ ಆಫೀಸ್ ಸುತ್ತ 1 ಕಿ.ಮೀ ಡ್ರೋನ್ ಹಾರಾಟ ನಿಷೇಧ!

Published

on

ಸೆಪ್ಟೆಂಬರ್ 17: ಮುಖ್ಯಮಂತ್ರಿಗಳು ಹಾಗೂ ರಾಜ್ಯ ಸಂಪುಟ ದರ್ಜೆಯ ಸಚಿವರ ಭದ್ರತೆ ಮತ್ತು ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಮಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ‘ತಾತ್ಕಾಲಿಕ ಕೆಂಪು ವಲಯ’ (ಟೆಂಪೋರರಿ ರೆಡ್ ಜೋನ್ ) ಎಂದು ಘೋಷಿಸಲಾಗಿದ್ದು, ಯಾವುದೇ ಮಾದರಿಯ ಡ್ರೋನ್ ಹಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಜಾರಿಯಲ್ಲಿರುವ ಸಮಯ:ಸೆಪ್ಟೆಂಬರ್ 17 ರಂದು ಸಂಜೆ 4:00 ಗಂಟೆಯಿಂದ ಸೆಪ್ಟೆಂಬರ್ 19 ರಂದು ಬೆಳಿಗ್ಗೆ 10:00 ಗಂಟೆಯವರೆಗೆ ಈ ಕಟ್ಟುನಿಟ್ಟಿನ ನಿಯಮ ಜಾರಿಯಲ್ಲಿರಲಿದೆ.ರೆಡ್ ಝೋನ್ ವ್ಯಾಪ್ತಿಗೆ ಒಳಪಡುವ ಪ್ರದೇಶಗಳು:ಮುಖ್ಯಮಂತ್ರಿಗಳು ಹಾಗೂ ಸಚಿವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈ ಕೆಳಗಿನ ಪ್ರಮುಖ ಮೂರು ಸ್ಥಳಗಳ ಸುತ್ತಲಿನ 1 ಕಿಲೋಮೀಟರ್ ವ್ಯಾಪ್ತಿಯನ್ನು ತಾತ್ಕಾಲಿಕ ಕೆಂಪು ವಲಯ ಎಂದು ಗುರುತಿಸಲಾಗಿದೆ:ಮೇರಿಹಿಲ್ ಹೆಲಿಪ್ಯಾಡ್ ಸುತ್ತಲಿನ 1 ಕಿ.ಮೀ ವ್ಯಾಪ್ತಿಹೋಟೇಲ್ ತಾಜ್ ವಿವಾಂತ (ಮುಖ್ಯಮಂತ್ರಿಯವರ ವಾಸ್ತವ್ಯದ ಸ್ಥಳ) ಸುತ್ತಲಿನ 1 ಕಿ.ಮೀ ವ್ಯಾಪ್ತಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾಸೌಧ’ – ಪಡೀಲ್ (ರಾಜ್ಯ ಸಚಿವ ಸಂಪುಟ ಸಭೆ ನಡೆಯುವ ಸ್ಥಳ) ಸುತ್ತಲಿನ 1 ಕಿ.ಮೀ ವ್ಯಾಪ್ತಿನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ:ಉಲ್ಲೇಖಿತ ಅವಧಿಯಲ್ಲಿ ಈ ಪ್ರದೇಶಗಳಲ್ಲಿ ಪ್ರಚಾರ, ವೀಡಿಯೋಗ್ರಫಿ ಅಥವಾ ಯಾವುದೇ ಖಾಸಗಿ ಉದ್ದೇಶಕ್ಕಾಗಿ ಡ್ರೋನ್ ಹಾರಾಟ, ಬಳಕೆ ಹಾಗೂ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
 
ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ಡ್ರೋನ್ ಹಾರಾಟ ನಡೆಸುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಸಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement