Published
49 minutes agoon
By
Akkare News
ಮಂಗಳೂರು: ಇಲ್ಲಿ ಶುಕ್ರವಾರ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನ ನೀಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. 
ಸತತ ಮೂರು ಗಂಟೆಗಳ ಕಾಲ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಸಂಪುಟದಲ್ಲಿ ತುಳುವಿಗೆ ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನ ನೀಡುವ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಕರಾವಳಿಯ ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ನಡೆದಿದ್ದು, ದಕ್ಷಿಣ ಕನ್ನಡ ಮತ್ತು, ಉಡುಪಿಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ತುಳು ಮಾತೃಭಾಷಿಗರಾಗಿದ್ದಾರೆ. ಈ ಮೂಲಕ ಸರಕಾರ ಭಾವನಾತ್ಮಕ ವಿಚಾರಕ್ಕೂ ಮನ್ನಣೆ ನೀಡಿದೆ.


