Connect with us

ಅಭಿವೃದ್ಧಿ ಕಾರ್ಯಗಳು

ಕರಾವಳಿ ಭಾಗಕ್ಕೆ ಬಂಪರ್‌ ಪ್ಯಾಕೇಜ್‌: ₹32,611 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಕ್ಯಾಬಿನೆಟ್‌ ಗ್ರೀನ್‌ ಸಿಗ್ನಲ್‌

Published

on

ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕರಾವಳಿ ಭಾಗದ ಮೂಲಸೌಕರ್ಯ, ಪ್ರವಾಸೋದ್ಯಮ, ಬಂದರು, ರಸ್ತೆ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡುವ ₹32,611 ಕೋಟಿ ಮೊತ್ತದ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಿಂದ ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹೊಸ ವೇಗ ಸಿಗುವ ನಿರೀಕ್ಷೆ ಮೂಡಿದೆ.

ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್ ಇದರಲ್ಲಿ 16,000 ಕೋಟಿ ರೂ. ಗ್ರಾಮೀಣಾಭಿವೃದ್ಧಿ ಯೋಜನೆಯಾಗಿದ್ದು, ಉಳಿದ ಮೊತ್ತ ಕರಾವಳಿ ಜಿಲ್ಲೆಗಳಿಗೆ ಸಂಬಂಧಿಸಿದೆ ಎಂದು ವಿವರಿಸಿದರು. ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026, 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್ ನಿರ್ಮಾಣ ಸೇರಿದಂತೆ 32,611 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
 
ಬದ್ಧತೆ ಇರುವ ಸರ್ಕಾರ ನಮಗೆ ಬದ್ಧತೆ ಇದೆ. ನಾವು ಜನರ ಭಾವನೆ ಮೇಲಲ್ಲ. ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ಭಾವನೆಗಳ ಆಧಾರದ ಮೇಲೆ ಸಮಾಜ ಕಟ್ಟಲ್ಲ. ಸಾಮಾಜಿಕ ಆರ್ಥಿಕ ಶಕ್ತಿ ತುಂಬಿ ಬದುಕು ಕಟ್ಟಿಕೊಡಲಾಗುವುದು ಎಂದು ತಿಳಿಸಿದರು. ಅವಶ್ಯತೆ ಇದ್ದಲ್ಲಿ ಆರ್ಥಿಕ ಹಾಗೂ ಕಾನೂನು ಚೌಕಟ್ಟು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಸಚಿವ ಸಂಪುಟ ಸಭೆ ನಡೆಸುವ ತೀರ್ಮಾನ ಮಾಡಿ ಆಗ ಅಗತ್ಯವಿರುವ ವಿಚಾರಗಳ ಬಗ್ಗೆ ತೀರ್ಮಾನಿಸಲಾಗುವುದು. ಇದು ಟೀಮ್ ಕರ್ನಾಟಕ. ಸಚಿವ ಸಂಪುಟ ನಿಮ್ಮ ಜೊತೆ ಇದೆ. ತುಳು ಭಾಷೆಯನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸೀಮಿತವಾಗಿ ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ ಮಾಡಲಾಗುವುದು.
ಮಾಜಿ ಸಚಿವ ರಮಾನಾಥ ರೈ ಅವರು ತುಳು ಭಾಷೆಗೆ 2 ನೇ ಹೆಚ್ಚುವರಿ ಭಾಷೆಯಾಗಿ ಘೋಷಿಸಲು ಮೊದಲು ಬೇಡಿಕೆ ಇಟ್ಟಿದ್ದರು ಎಂದು ಸ್ಮರಿಸಿದರು. ಸಚಿವ ಯು.ಟಿ. ಖಾದರ್‌, ಶಾಸಕ ಅಶೋಕ್‌ ಕುಮಾರ್‌ ರೈ ಸೇರಿದಂತೆ ಹಲವು ಜನಪ್ರತಿನಿಧಿಗಳು ಒಟ್ಟಾಗಿ ಒತ್ತಡ ಹೇರಿದ್ದರು ಎಂದು ಅವರು ತಿಳಿಸಿದರು. ತುಳು ಭಾಷೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಅಂಗೀಕರಿಸಿದ ಹಿನ್ನೆಲೆಯಲ್ಲಿ ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಮುಖ್ಯಮಂತ್ರಿಗಳು ಅಭಿನಂದಿಸಿದರು. ದಕ್ಷಿಣ ಕನ್ನಡಕ್ಕೆ ಮಂಗಳೂರು ಮರುನಾಮಕರಣ: ಜನಾಭಿಪ್ರಾಯ ಸಂಗ್ರಹ ಮಂಗಳೂರಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಇದೆ. ದಕ್ಷಿಣ ಕನ್ನಡದ ಬದಲಿಗೆ ಮಂಗಳೂರು ಎಂದು ಹೆಸರಿಸುವ ಬಗ್ಗೆ ಜನಾಭಿಪ್ರಾಯ ಪಡೆದು ತೀರ್ಮಾನಿಸಲಾಗುವುದು. ಕರಡು ಅಧಿಸೂಚನೆ ಹೊರಡಿಸಿ ಒಂದು ತಿಂಗಳ ಅವಧಿ ನೀಡಿ, ಜನರ ಭಾವನೆ, ಜನರ ಅಭಿಪ್ರಾಯ ಪಡೆದು ತೀರ್ಮಾನಿಸಲಾಗುವುದು ಎಂದರು.

ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ

ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈವರೆಗಿನ ಎಲ್ಲಾ ನೀತಿಗಳಿಗಿಂತ ಭಿನ್ನವಾದ ನೀತಿ ಇದಾಗಲಿದೆ. ಹೂಡಿಕೆದಾರರಿಗೆ ಹೆಚ್ಚಿನ ಶಕ್ತಿ ಹಾಗೂ ಸಾಲ ಮರುಪಾವತಿಗೆ ಸಮಯಾವಕಾಶ ನೀಡಲಾಗುವುದು. ಮಲೆನಾಡು ಒಳಗೊಂಡಂತೆ ಕರಾವಳಿ ಪ್ರದೇಶದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಮೂಲಕ ಪ್ರವಾಸೋದ್ಯಮ ಯೋಜನೆಗಳನ್ನು ಮೂಲಸೌಕರ್ಯ ಯೋಜನೆಗಳೆಂದು ಪರಿಗಣಿಸಲಾಗುವುದು. ಅಲ್ಲದೆ ಅನೇಕ ಪ್ರೋತ್ಸಾಹಕಗಳನ್ನು ನೀಡಲು ಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

 
ಮೀನುಗಾರಿಕಾ ವಿಶ್ವವಿದ್ಯಾಲಯ ಮೀನುಗಾರಿಕೆಗೆ ಸಂಬಂಧಿಸಿದಂತೆ Fisheries, Blue economy university ಯನ್ನು ಸ್ಥಾಪಿಸಲಾಗುವುದು. ಪ್ರಸ್ತುತ ಮೀನುಗಾರಿಕಾ ಕಾಲೇಜಿನ ವಿದ್ಯಾರ್ಥಿಗಳ ಪ್ರವೇಶವನ್ನು 60 ರಿಂದ 200 ಸೀಟುಗಳಿಗೆ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದರು. ಈ ಭಾಗದಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗೆ ಬೇಡಿಕೆ ಬಂದಿದೆ ಎಂದು ತಿಳಿಸಿದ ಅವರು ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ 549 ಕೋಟಿ ರೂ. ಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement