ಪುತ್ತೂರು: ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತ ಕಾರ್ತಿಕ್ ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಅವರ ಮೇಲಿನ ಆರೋಪಗಳು ಸಾಬೀತಾಗಿವೆ ಎಂದು ತಿಳಿದು ಬಂದಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಸೆ. 22ರಂದು ಪ್ರಕಟಿಸುವ ಸಾಧ್ಯತೆಯಿದೆ.
.
ಪ್ರಕರಣದಲ್ಲಿ ಸರಕಾರಿ ವಕೀಲರಾದ ಜಯಂತಿ ಅವರು ಸರಕಾರದ ಪರವಾಗಿ ವಾದ ಮಂಡಿಸಿದ್ದರು. ಈ ಪ್ರಕರಣದ ಇನ್ನೋರ್ವ ಆರೋಪಿಯಾಗಿದ್ದ ಚರಣ್ ರಾಜ್ ರೈ ಅವರು ಈಗಾಗಲೇ ಕೊಲೆಯಾಗಿದ್ದಾರೆ.