Published
2 days agoon
By
Akkare News
ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ವಿಶೇಷ ತನಿಖಾ ತಂಡವನ್ನು (SIT) ರಚಿಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ವಿಶೇಷವೆಂದರೆ, ಈ ಹಿಂದೆ ಈ ಪ್ರಕರಣದ ತನಿಖೆ ನಡೆಸಿ ಲೋಪ ಎಸಗಿದ ಅಥವಾ ಭಾಗಿಯಾಗಿದ್ದ ಯಾವ ಅಧಿಕಾರಿಗಳನ್ನು ಹೊಸದಾಗಿ ರಚನೆಯಾಗುವ ಎಸ್‌ಐಟಿ ತಂಡದಲ್ಲಿ ಯಾವುದೇ ಕಾರಣಕ್ಕೂ ಸೇರಿಸಬಾರದು ಎಂಬ ಕಠಿಣ ಷರತ್ತನ್ನೂ ಸುಪ್ರೀಂಕೋರ್ಟ್ ವಿಧಿಸಿದೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಯಾವ ದಕ್ಷ ಮತ್ತು ನಿಷ್ಪಕ್ಷಪಾತ ಅಧಿಕಾರಿಗಳ ನೇತೃತ್ವದಲ್ಲಿ ಹೊಸ ತನಿಖಾ ತಂಡವನ್ನು ರಚಿಸಲಿದೆ ಎಂಬುದು ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಸರ್ಕಾರದ ಕೈಸೇರಿದ ತಕ್ಷಣವೇ ತನಿಖೆಯ ಸ್ವರೂಪ ಮತ್ತು ಎಸ್‌ಐಟಿ ರಚನೆಯ ಸಂಪೂರ್ಣ ಚಿತ್ರಣ ಹೊರಬೀಳಲಿದೆ.