Published
12 hours agoon
By
Akkare News
ಪುತ್ತೂರು: ಕರ್ನಾಟಕ ನಗರಾಭಿವೃದ್ದಿ ಇಲಾಖೆಯ ಮೂಲಕ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ರವರು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ನಗರಸಭೆ ಹಾಗೂ ವಿಟ್ಲ ಪಟ್ಟಣ ಪಂಚಾಯತ್‌ಗೆ ಒಟ್ಟು ೧೦ ಕೋಟಿ ಅನುದಾನವನ್ನು ಮಂಜೂರು ಮಾಡಿದ್ದಾರೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. 
ವಿಟ್ಲ ಪಟ್ಟಣಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಈಗಾಗಲೇ ಹೆಚ್ಚುವರಿ ಅನುದಾನವನ್ನು ನೀಡಲಾಗಿದ್ದು ಮುಂದಿನ ಜನವರಿ ಅಥವಾ ಫೆಬ್ರವರಿಯೊಳಗೆ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು , ವಿಟ್ಲದಲ್ಲಿ ಅನೇಕ ರಸ್ತೆಗಳ ಅಭಿವೃದ್ದಿ ಆಗಬೇಕಿದ್ದು ಇದಕ್ಕಾಗಿ ವಿಶೇಷ ಅನುದಾನದ ಬೇಡಿಕೆಯನ್ನು ಮುಖ್ಯಮಂತ್ರಿಗಳ ಮುಂದಿಟ್ಟಿದ್ದರು.



