Published
6 hours agoon
By
Akkare News
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಧಾರ್ಮಿಕತೆ, ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಸಾರುವ ನಿಟ್ಟಿನಲ್ಲಿ ಡಿ.8ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ, ಸ್ವರ್ಣೋದ್ಯಮಿ ಜಿ.ಎಲ್.ಬಲರಾಮ ಅಚಾರ್ಯ, ಅಧ್ಯಕ್ಷರಾಗಿ ಸಾಮಾಜಿಕ ಧುರೀಣ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಎನ್.ರವೀಂದ್ರ ಶೆಟ್ಟಿ ನುಳಿಯಾಲು ಅವರನ್ನು ಆಯ್ಕೆ ಮಾಡಲಾಗಿದೆ. 
ಉಪಾಧ್ಯಕ್ಷರಾಗಿ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ದೇರ್ಲ ಕರುಣಾಕರ ರೈ, ಪರ್ಲಡ್ಕ ಎಸ್‌ಡಿಪಿ ರೆಮಿಡೀಸ್‌ನ ಆಯುರ್ವೇದ ತಜ್ಞ ಡಾ.ಹರಿಕೃಷ್ಣ ಪಾಣಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಾಧ್ಯಾಪಕರೂ ಆಗಿರುವ ದೈವ ನರ್ತಕ ಡಾ|ರವೀಶ್ ಪಡುಮಲೆ, ಸಂಚಾಲಕರಾಗಿ ಸಂತೋಷ್ ಕುಮಾರ್ ರೈ ಗಾಡಿಗುಡ್ಡೆ, ಕೋಶಾಧಿಕಾರಿಯಾಗಿ ಯಸ್.ದಾಮೋದರ ಪಾಟಾಳಿ, ಜೊತೆ ಕಾರ್ಯದರ್ಶಿಯಾಗಿ ಮುಂಡೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಸಿಇಒ ಜಯಪ್ರಕಾಶ್ ರೈ ಚೆಲ್ಯಡ್ಕ, ಸಹಕೋಶಾಧಿಕಾರಿಯಾಗಿ ಶ್ರೀಧರ್ ತೆಂಕಿಲ ಅವರನ್ನು ಆಯ್ಕೆ ಮಾಡಲಾಗಿದೆ.

*ಕಾರ್ಯಕ್ರಮದಲ್ಲಿ ಸತೀಶ್ ಶೆಟ್ಟಿ ಪಟ್ಲ ಮತ್ತು ಜನ್ಸಾಲೆ ರಾಘವೇಂದ್ರ ಆಚಾರ್ಯ ಅವರ ಭಾಗವತಿಕೆ ಪ್ರಮುಖ ಆಕರ್ಷಣೆಯಾಗಲಿದೆ. ಸಂಜೆ ಗಂಟೆ 6ಕ್ಕೆ ಧರ್ಮ ಸಭೆ ನಡೆಯಲಿದ್ದು, ರಾತ್ರಿ ಗಂಟೆ 8ರಿಂದ ಖ್ಯಾತ ಸಂಗೀತ ಕಲಾವಿದ ಡಾ|ವಿದ್ಯಾಭೂಷಣ್ ಮತ್ತು ಅವರ ಪುತ್ರಿಯಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು ತಿಳಿಸಿದ್ದಾರೆ.*


