Published
7 hours agoon
By
Akkare News
ಬೆಂಗಳೂರು, ಸೆ.25: ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ ಬೀಳುವ ಸಾಧ್ಯತೆ ಎದುರಾಗಿದೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹5ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದೆ ಎಂದು ವರದಿಯಾಗಿದೆ. ಈ ಕುರಿತು ಶೀಘ್ರದಲ್ಲೇ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ.
ಹಾಲು ಉತ್ಪಾದನೆ, ಸಂಗ್ರಹಣೆ ಹಾಗೂ ನಿರ್ವಹಣಾ ವೆಚ್ಚಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹಾಲಿನ ಮಾರಾಟ ದರ ಪರಿಷ್ಕರಿಸುವಂತೆ ರಾಜ್ಯದ 16 ಹಾಲು ಒಕ್ಕೂಟಗಳು ಸರ್ಕಾರದ ಮೇಲೆ ಒತ್ತಡ ಹೇರಿದ್ದವು. ಆರಂಭದಲ್ಲಿ ಪ್ರತಿ ಲೀಟರ್‌ಗೆ ₹10ರಷ್ಟು ದರ ಹೆಚ್ಚಳ ಮಾಡುವಂತೆ ಒಕ್ಕೂಟಗಳು ಬೇಡಿಕೆ ಇಟ್ಟಿದ್ದವು.