Published
6 hours agoon
By
Akkare News
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಆಲ್ ಕಾಲೇಜ್ ಸ್ಟೂಡೆಂಟ್ಸ್ ಯೂನಿಯನ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ವೇಳೆ ಕಟ್ಟಡದ ಮೊದಲ ಮಹಡಿಯ ತಡೆ ಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಯೆಮ್ಮೆಕೆರೆಯಲ್ಲಿ ನಡೆದಿದೆ.
ಗಾಯಗೊಂಡವರನ್ನು ಸುರಿಂಜೆ ನಿವಾಸಿ ಮೊಹಮ್ಮದ್ ಶನಾನ್ (18), ಅಡ್ಯಾರ್‌ನ ಹನೀಫ್ (23), ಕಸ್ಬಾ ಬೆಂಗ್ರೆಯ ಮೊಹಮ್ಮದ್ ಶಕೀಲ್ ಹುಸೇನ್ (18) ಹಾಗೂ ಕಾವೂರಿನ ಗಾಂಧಿನಗರ ನಿವಾಸಿ ದಾವೂದ್ ಫರ್ಸೀನ್ ಅಹ್ಮದ್ (18) ಎಂದು ಗುರುತಿಸಲಾಗಿದೆ.