Published
51 minutes agoon
By
Akkare News
ಸೆ.28ರಿಂದ 30ರವರೆಗೆ ಮೂರು ದಿನ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರದ ಹಿನ್ನೆಲೆ ಗ್ರಾಹಕರ ಅನುಕೂಲಕ್ಕಾಗಿ ಇಂದು (ಭಾನುವಾರ) ಬ್ಯಾಂಕ್ (Bank) ಕಾರ್ಯನಿರ್ವಹಿಸಲಿವೆ.
ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಸೆ.28 ರಿಂದ 30ರವರೆಗೆ ಕರೆ ನೀಡಿರುವ ಮೂರು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ (Bank Strike) ಮತ್ತು ವಾರಾಂತ್ಯದ ರಜಾದಿನಗಳನ್ನು ಗಮನದಲ್ಲಿಟ್ಟುಕೊಂಡು ಜನರ ಬ್ಯಾಂಕಿಂಗ್ ಅಗತ್ಯತೆಗಳನ್ನು ಪೂರೈಸಲು ಕೇಂದ್ರ ಸರ್ಕಾರವು ಈ ನಿರ್ಧಾರ ಕೈಗೊಂಡಿದೆ.
ಸಾರ್ವಜನಿಕರ ಅಗತ್ಯ ಬ್ಯಾಂಕಿಂಗ್ ಸೇವೆಗಳಿಗೆ ದೀರ್ಘಕಾಲದವರೆಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳು ಇಂದು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಜೊತೆಗೆ ಎಲ್ಲಾ ಬ್ಯಾಂಕ್ ಶಾಖೆಗಳು, ಕಚೇರಿಗಳು, ಎಟಿಎಂ-ಸಂಯೋಜಿತ ಶಾಖೆಗಳು ಮತ್ತು ಕರೆನ್ಸಿ ಚೆಸ್ಟ್‌ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ. 
ವಾರದಲ್ಲಿ 5 ದಿನಗಳ ಕೆಲಸದ ಅವಧಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.28ರಿಂದ 30ರವರೆಗೆ ಬ್ಯಾಂಕ್ ಸಿಬ್ಬಂದಿ ಮುಷ್ಕ ನಡೆಸಲಿದ್ದಾರೆ. ಶಾಖೆಗಳಿಗೆ ತೆರಳಿ ಮಾಡಬೇಕಾದ ತುರ್ತು ಕೆಲಸಗಳನ್ನು ಗ್ರಾಹಕರು ಇಂದೇ ಮುಗಿಸಿಕೊಳ್ಳಬೇಕಾಗಿ ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ಸಲಹೆ ನೀಡಿದೆ. ಡಿಜಿಟಲ್ ವಹಿವಾಟು, ಆನ್‌ಲೈನ್ ಮತ್ತು ಎಟಿಎಂ ಸೇವೆಗಳು ಎಂದಿನಂತೆ ಲಭ್ಯವಿರಲಿದೆ.


